

ಬಾದಾಮಿ : ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸಬೇಕು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ತಾಲೂಕಿನ ಮುತ್ತಲಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ-2025 ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಮಕ್ಕಳಿಗೆ ಶಿಕ್ಷಣದೊಂದಿಗೆ ಬದುಕುವ ಕಲೆ, ಸಂಸ್ಕೃತಿ ಕಲಿಸಬೇಕಿದೆ ಎಂದರು.
ಸರ್ಕಾರಿ ಶಾಲೆಗಳು ಬದಲಾವಣೆಯಾಗಬೇಕಿದೆ. ಬಡವರಿಗೂ ಗುಣಮಟ್ಟದ ಶಿಕ್ಷಣ ಸಿಗಲಿ ಎಂಬ ಉದ್ದೇಶದಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್, ಪಿಎಂಶ್ರೀ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಯುಕೆಪಿ, ಎಲ್‌ಕೆಜಿ ತರಗತಿ ಪ್ರಾರಂಭಿಸಲಾಗುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಬೇಕು ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಜಿ. ಮಿರ್ಜಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ, ನಿವೃತ್ತ ಪ್ರಾಚಾರ್ಯ ಎಂ.ಎ್. ಕುರಿ, ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಎಸ್.ಎಸ್. ಮಾಳಗಿ ಮಾತನಾಡಿದರು. ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಪ್ಪ ಅಳ್ಳಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ. ಎಂ.ಎನ್. ಸಿದ್ದಲಿಂಗಪ್ಪನ್ನವರ, ಕಾರ್ಯದರ್ಶಿ ರಾಚಣ್ಣ ಪಟ್ಟಣದ, ರಾಜ್ಯ ಪರಿಷತ್ ಸದಸ್ಯ ಎ.ಪಿ. ಮೇಟಿ, ಪಿಕೆಪಿಎಸ್ ಅಧ್ಯಕ್ಷ ಬಿ.ಡಿ. ಪೂಜಾರ, ಗುತ್ತಿಗೆದಾರ ರೇವಣಸಿದ್ದಪ್ಪ ನೋಟಗಾರ, ತಾಲೂಕು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಮಹಾಂತೇಶ ನಾರಗಲ್ ಇದ್ದರು.
ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ. ದೊಡ್ಡಪ್ಪನ್ನವರ ಸ್ವಾಗತಿಸಿದರು. ಸಹಶಿಕ್ಷಕಿ ಜಯಶ್ರೀ ಆಲೂರ ನಿರೂಪಿಸಿದರು. ಎಸ್.ವೈ. ಮರಿಯನ್ನವರ ವಂದಿಸಿದರು. ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.