ಶಿಬಿರಗಳು ಶಿಸ್ತು ನಾಯಕತ್ವದ ಮೌಲ್ಯಗಳನ್ನು ಬೆಳೆಸುತ್ತವೆ

bkt-3-8
ಬಾಗಲಕೋಟೆ ಸ.ಪ್ರ.ದ ಕಾಲೇಜಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳು ಅಡಿಯಲ್ಲಿ ಮೂರು ದಿನಗಳ ಕಾಲ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಮುದ್ದೇಬಿಹಾಳ ಕಾಲೇಜಿನ ರೂವರ್ಸ ಸ್ಕೌಟ್ಸ್ ಲೀಡರ್ ಪ್ರೊ.ಎಸ್.ಎಸ್.ಹೂಗಾರ ಮಾತನಾಡಿದರು. ಡಾ.ಜಿ.ಜಿ.ಹಿರೇಮಠ, ಡಾ.ಸುಮಂಗಲಾ ಮೇಟಿ, ರೋವರ್ಸ ಘಟಕದ ಲೀಡರ್ ಪರಸಪ್ಪ ತಳವಾರ ಇತರರು ಇದ್ದರು.
Published on

ಬಾಗಲಕೋಟೆ: ಪದವಿ ಕಾಲೇಜುಗಳಲ್ಲಿರುವ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ ನಡೆಸುವ ಶಿಬಿರಗಳು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆಯ ಮನೋಭಾವ ಬೆಳೆಸುವ ಮೂಲಕ ಶಿಬಿರಾರ್ಥಿಗಳಲ್ಲಿ ಶಿಸ್ತು, ಪ್ರಾಮಾಣಿಕತೆ ಮತ್ತು ನಾಯಕತ್ವದ ಮೌಲ್ಯಗಳನ್ನು ಬೆಳೆಸುತ್ತವೆ ಎಂದು ಮುದ್ದೇಬಿಹಾಳ ಕಾಲೇಜಿನ ರೂವರ್ಸ ಸ್ಕೌಟ್ಸ್ ಲೀಡರ್ ಪ್ರೊ.ಎಸ್.ಎಸ್.ಹೂಗಾರ ಹೇಳಿದರು.

ನವನಗರದ ಸ.ಪ್ರ.ದ ಕಾಲೇಜಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳು ಅಡಿಯಲ್ಲಿ ಮೂರು ದಿನಗಳ ಕಾಲ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಾಮಾಜಿಕ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಬೇಕು ಎಂದರು.

ಡಾ.ಜಿ.ಜಿ.ಹಿರೇಮಠ ಮಾತನಾಡಿ, ಶಿಬಿರಗಳು ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಭೌತಿಕ ಸಾಮಾರ್ಥ್ಯದ ಗುಣಮಟ್ಟವನ್ನು ಹೆಚ್ಚಿಸುತ್ತವೆ ಇದರಂದ ತಮ್ಮ ಬದುಕಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು.

ವೇದಿಕೆಯಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕ ಪ್ರಮೋದ್ ಚೌಗಲೆ, ಕಾಲೇಜಿನ ರೇಂರ‍್ಸ್ ಘಟಕದ ಲೀಡರ್ ಡಾ.ಸುಮಂಗಲಾ ಮೇಟಿ, ರೋವರ್ಸ ಘಟಕದ ಲೀಡರ್ ಪರಸಪ್ಪ ತಳವಾರ, ಎನ್.ಎಸ್.ಎಸ್. ಘಟಕದ ಸಂಚಾಲಕ ಶಶಿಧರ ಕುಂಬಾರ, ಡಾ.ಚಂದ್ರಶೇಖರ ಕಾಳನ್ನವರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net