ಶಿಬಿರದ ಮಾಹಿತಿ ಮಕ್ಕಳಿಗೆ ನೀಡಿ ಮೌಲ್ಯ ತುಂಬಬೇಕು

30adarshkdga1
Published on

ಮಡಿಕೇರಿ: ಶಿಕ್ಷಕರು ಶಿಬಿರದಲ್ಲಿ ಪಡೆದ ಮಾಹಿತಿಯನ್ನು ಮಕ್ಕಳಿಗೆ ಹೇಳುವುದರ ಮೂಲಕ ಮಕ್ಕಳಲ್ಲಿ ಮೌಲ್ಯ ತುಂಬಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗದಾಮಯ್ಯ ಹೇಳಿದರು.


ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಗರದ ಗಾಂಧಿ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮೂಲ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.


ಶಿಕ್ಷಕರು ಮೂಲ ತರಬೇತಿ ಶಿಬಿರದಲ್ಲಿ ಪಡೆದಂತ ತರಬೇತಿಯ ಮಾಹಿತಿಯನ್ನು ಮಕ್ಕಳಿಗೆ ನೀಡುವುದರ ಮೂಲಕ ಮಕ್ಕಳಲ್ಲಿ ಮೌಲ್ಯ ತುಂಬಬೇಕು. ಆ ಮೂಲಕ ಸದೃಢ ರಾಷ್ಟ್ರದ ನಿರ್ಮಾಣವಾಗಬೇಕು ಎಂದರು.


ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಡಾ.ಸದಾಶಿವಯ್ಯ.ಎಸ್.ಪಲ್ಲೇದ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಉತ್ತಮ ಗುಣಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ನಡೆಯುತ್ತಿದೆ. ಇದಕ್ಕೆ ರಾಜ್ಯ ಸಂಸ್ಥೆಯಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ. ಅದರ ಪ್ರಯೋಜನವನ್ನು ಪಡೆದುಕೊಳ್ಳಲು ಶಿಕ್ಷಕರಿಗೆ ಸಲಹೆ ನೀಡಿದರು.


ಮಡಿಕೇರಿ ನಗರಸಭಾ ಸದಸ್ಯ ಶಾರದಾ ನಾಗರಾಜ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಂದ ಮಕ್ಕಳಲ್ಲಿ ದೇಶ ಸೇವಾ ಮನೋಭಾವ ಬೆಳೆಯುತ್ತದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಮಾತನಾಡಿದರು. ತರಬೇತಿ ನಾಯಕರಾದ ಮೈಸೂರಿನ ಶ್ರೀರಾಮ್ ಸ್ಕೌಟ್ಸ್ ಮತ್ತು ಕೊಡಗಿನ ಅಲಿಮ.ಪಿ.ಎಚ್ ಗೈಡ್ಸ್ ಮೂಲ ತರಬೇತಿಯ ವರದಿ ಮಂಡಿಸಿದರು.


ಜಿಲ್ಲಾ ತರಬೇತಿ ಆಯುಕ್ತ ಮೈಥಿಲಿ ರಾವ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯಲ್ಲಿ ಮಕ್ಕಳು ಉತ್ತಮ ಗುಣಮಟ್ಟದ ತರಬೇತಿ ಪಡೆದು ಅವರು ವಿದ್ಯಾರ್ಥಿಗಳಾಗಿರುವಾಗಲೇ ದಳ ತೆರೆಯುವಷ್ಟು ಪ್ರಾವೀಣ್ಯತೆ ಹೊಂದಿರುತ್ತಾರೆ ಎಂದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಜಿಲ್ಲಾ ಸಂಘಟಕರಾದ ದಮಯಂತಿ, ಖಜಾಂಚಿ ಪುಷ್ಪವೇಣಿ, ಸಹ ಕಾರ್ಯದರ್ಶಿ ಬೊಳ್ಳಜಿರ.ಬಿ.ಅಯ್ಯಪ್ಪ ಮತ್ತು ಸ್ಕೌಟ್ಸ್ ಮಾಸ್ಟರ್ ಹಾಗೂ ಗೈಡ್ ಕ್ಯಾಪ್ಟನ್ಸ್‌ಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net