ಶಿಬಿರದಲ್ಲಿ 140 ಜನರು ಶಸ್ತ್ರಚಿಕಿತ್ಸೆಗೆ ಆಯ್ಕೆ

Published on

ಚಾಮರಾಜನಗರ : ರೋಟರಿ ಸಂಸ್ಥೆ ವತಿಯಿಂದ ಭಾನುವಾರ ಆಯೋಜಿಸಿದ್ದ ಕಣ್ಣಿನ ಉಚಿತ ತಪಾಸಣಾ ಶಿಬಿರದಲ್ಲಿ 270 ಜನರು ಭಾಗವಹಿಸಿ 140 ಜನರನ್ನು ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.

ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ರೋಟರಿ ಭವನದಲ್ಲಿ ರೋಟರಿ ಸಂಸ್ಥೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಅರವಿಂದ ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ 270 ಜನರು ಭಾಗವಹಿಸಿ ತಪಾಸಣೆ ಮಾಡಿಸಿಕೊಂಡರು. ಇದರಲ್ಲಿ 140 ಜನರು ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಅವರನ್ನು ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಶಿಬಿರದಲ್ಲಿ ವ್ಯವಸ್ಥೆ ಮಾಡಲಾಯಿತು.

ರೋಟರಿ ಸಂಸ್ಥೆ ಅಧ್ಯಕ್ಷ ಕಾಗಲವಾಡಿ ಚಂದ್ರು ಮಾತನಾಡಿ, ರೋಟರಿ ಸಂಸ್ಥೆಯು ಪ್ರತಿ ತಿಂಗಳು ಮೊದಲನೆಯ ಭಾನುವಾರ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಅಯೋಜಿಸಲಾಗುತ್ತಿದೆ. ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆಯುತ್ತಿದ್ದಾರೆ. ಮುಂದಿನ ಶಿಬಿರದ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ರೋಟರಿ ಸಂಸ್ಥಾಪಕ ಸದಸ್ಯ ಶ್ರೀನಿವಾಸಶೆಟ್ಟಿ, ಮಾಜಿ ಅಧ್ಯಕ್ಷ ಚಂದ್ರಪ್ರಭಜೈನ್, ಎಸ್.ಆರ್.ಎಸ್ ಶ್ರೀನಿವಾಸ್, ಪ್ರಭಾಕರ್, ಜಿ.ಅಂಕಶೆಟ್ಟಿ, ನೇಮಿರಾಜ್, ಪ್ರಕಾಶ್,ಯೋಗರಾಜ್, ಅಬ್ದುಲ್ ಅಜೀಜ್, ಸಿ.ಎ.ನಾರಾಯಣ್, ಬಿ.ಕೆ.ಮೋಹನ್, ಪಿಆರ್ ಒ ವಿಜಯಕಾಂತ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net