

ಚಿಕ್ಕಮಗಳೂರು: ತಾಲೂಕಿನ ಶಿರವಾಸೆ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಗಜಾನನ ಕಲಾ ಮಂದಿರದಲ್ಲಿ ಗುರುವಂದನಾ ಹಾಗು ಹಳೆ ವಿಧ್ಯಾರ್ಥಿಗಳ ಸಮಾಗಮ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿದ ಶಿರವಾಸೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘುನಾಥ್, ಶಾಲೆಯಲ್ಲಿ ಗುರುವಂದನಾ ಹಾಗು ಹಳೆ ವಿಧ್ಯಾರ್ಥಿಗಳ ಸಮಾಗಮ ಕಾರ್ಯಕ್ರಮ ನಡೆಸುತ್ತಿರುವುದು ಸಂತಸ ತಂದಿದೆ. ಈ ಶಾಲೆಯಲ್ಲಿ ಕಲಿತ ಪ್ರತಿಯೊಬ್ಬ ವಿಧ್ಯಾರ್ಥಿಗೂ ಇದು ಹೆಮ್ಮೆಯ ವಿಷಯ. ನಮ್ಮಗೆ ವಿದ್ಯೆ ಕಲಿಸಿದ ಗುರುಗಳಿಗೆ ಇಂದು ಹಳೆ ವಿಧ್ಯಾರ್ಥಿಗಳ ಸಂಘದಿAದ ಸನ್ಮಾನ ಕಾರ್ಯಕ್ರಮ ನಡೆಸಿಕೊಡಗುತ್ತಿದೆ. ಪ್ರತಿಯೊಬ್ಬರ ಬದುಕಲ್ಲಿ ಗುರುಗಳ ಪಾತ್ರ ಮಹತರವಾಗಿದೆ. ಇಂದು ಈ ಶಾಲೆಯಲ್ಲಿ ವಿಧ್ಯೆ ಕಲಿತವರು ಹೊರಗಿನ ಆನೇಕ ಊರುಗಳಲ್ಲಿ, ಪಟ್ಟಣಗಳಲ್ಲಿ ತಮ್ಮ ಬದುಕನ್ನು ರೂಪಿಸಿಕೊಂಡಿದ್ದಾರೆ. ಅವರ ಬೆಳವಣಿಗೆಗೆ ಈ ಶಾಲೆ ಅಪಾರ ಕೊಡುಗೆ ನೀಡಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ಗುರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಹಿರಿಯ ವಿಧ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊAಡರು. ಕಾರ್ಯಕ್ರಮದಲ್ಲಿ ಹಿರಿಯ ವಿಧ್ಯಾರ್ಥಿಗಳು, ಶಿಕ್ಷಕರು, ಗ್ರಾಮಸ್ಥರು ಪಾಲ್ಗೊಂಡಿದ್ದರು.