ಶಿರಸಿ ನಗರಸಭೆ ಅಧ್ಯಕ್ಷರಾಗಿ ಗಣಪತಿ ನಾಯ್ಕ ಆಯ್ಕೆ

31sirsi5
Published on

ಶಿರಸಿ: ಇಲ್ಲಿನ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶನಿವಾರ ನಡೆದಿದ್ದು, ನಿರೀಕ್ಷೆಯಂತೆ ಬಿಜೆಪಿಯ ಗಣಪತಿ ನಾಯ್ಕ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ವೀಣಾ ಶೆಟ್ಟಿ ಆಯ್ಕೆಯಾಗಿದ್ದಾರೆ.

ನಗರಸಭೆಯ ಅಟಲಜೀ ಸಭಾಭವನದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಬಹುಮತ ಹೊಂದಿರುವ ಬಿಜೆಪಿಯ ಸದಸ್ಯರು ಅಧಿಕಾರದ ಗಾದಿಗೆ ಏರಿದರು.

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಗಣಪತಿ ನಾಯ್ಕ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವೀಣಾ ಶೆಟ್ಟಿ ನಾಮಪತ್ರ ಸಲ್ಲಿಸಿದ್ದರು. ಸ್ಪಷ್ಟ ಬಹುಮತ ಇಲ್ಲದೇ ಹೋದರೂ, ಸ್ಪರ್ಧೆ ಇರಬೇಕು ಎನ್ನುವ ಕಾರಣಕ್ಕೆ ಕಾಂಗ್ರೆಸ್​ನಿಂದ ಮಾಜಿ ಅಧ್ಯಕ್ಷ ಪ್ರದೀಪ ಶೆಟ್ಟಿ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಮೀಮ್ ಭಾನು ಉಮೇದುವಾರಿಕೆ ಸಲ್ಲಿಸಿದ್ದರು. ಒಟ್ಟು 31 ಮತಗಳಲ್ಲಿ ಬಿಜೆಪಿಯ ಗಣಪತಿ ನಾಯ್ಕ ಹಾಗೂ ಉಪಾಧ್ಯಕ್ಷೆ ವೀಣಾ ಶೆಟ್ಟಿ ತಲಾ 18 ಮತಗಳನ್ನು ಪಡೆದು ಗೆಲುವು ಸಾಧಿಸಿದರು.

ಶಿರಸಿ ನಗರವನ್ನು ಮಾದರಿ ನಗರವನ್ನಾಗಿ ಅಭಿವೃದ್ಧಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನೀರಿನ ಸಮಸ್ಯೆ ಹಾಗೂ ಫಾರಂ ನಂ.3 ಸಮಸ್ಯೆ ಆದ್ಯತೆ ಮೇರೆಗೆ ಬಗೆಹರಿಸಲು ಶ್ರಮಿಸುತ್ತೇನೆ.| ಗಣಪತಿ ನಾಯ್ಕ, ನೂತನ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net