ಶಿಲ್ಪಿ ಅರುಣ್ ಯೋಗಿರಾಜ್‌ಗೆ ಸನ್ಮಾನ

07Rajesh5
Published on

ಚಾಮರಾಜನಗರ: ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಸ್ಥಾಪಿಸಲಿರುವ ಶ್ರೀಮಹರ್ಷಿ ವಾಲ್ಮೀಕಿ, ಶ್ರೀ ಭಗೀರಥ ಮಹರ್ಷಿ ಹಾಗೂ ಶ್ರೀಕನಕದಾಸರ ಪುತ್ಥಳಿಗಳನ್ನು ಅಯೋಧ್ಯೆಯ ಶ್ರೀರಾಮಲಲ್ಲಾ ಶಿಲ್ಪದ ನಿರ್ಮಾತೃ ಮೈಸೂರಿನ ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಲಿದ್ದು, ಇವರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಸನ್ಮಾನಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಶಾಲು ಹೊದಿಸಿ, ಫಲ ತಾಂಬೂಲ ನೀಡಿ ಸನ್ಮಾನಿಸುವ ಮೂಲಕ ಶ್ರೀಮಹರ್ಷಿ ವಾಲ್ಮೀಕಿ, ಶ್ರೀಭಗೀರಥ ಮಹರ್ಷಿ ಹಾಗೂ ಶ್ರೀಕನಕದಾಸರ ಪುತ್ಥಳಿಗಳ ನಿರ್ಮಾಣಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಪಂ ಸಿಇಒ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಂಜುಂಡಯ್ಯ, ಇನ್ನಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net