ಶಿವನ ಜಪ ಮಾಡಿದ ಕೆ.ಎಸ್.ಈಶ್ವರಪ್ಪ

ks eswrappa
Published on

ಬಳ್ಳಾರಿ ; ಇಲ್ಲಿನ ಕೋಟೆ ಮಲ್ಲೇಶ್ವರ ದೇವಸ್ಥಾನಕ್ಕೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕುಟುಂಬ ಸಮೇತ ಭಾನುವಾರ ಭೇಟಿ ನೀಡಿ ಪೂಜೆ ಸಲ್ಲಿಸಿ ಬೇಡಿದ ವರ ಕೊಡು ಶಿವ ಎಂದು ಹಾಡುವ ಮೂಲಕ ಗಮನ ಸೆಳೆದರು.
ನಗರದ ಕನಕದುರ್ಗಮ್ಮ ಹಾಗೂ ಚೌಡಶ್ವೇರಿ ದೇವಸ್ಥಾನಗಳಿಗೆ ತೆರಳಿ ಹರಕೆ ಸಲ್ಲಿಸಿ ವಿಶೇಷ ಪೂಜೆ ಸಲ್ಲಿಸಿದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಲೋಕಸಭಾ ಚುನಾವಣೆಗೆ ಮುನ್ನ ಬಳ್ಳಾರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಇನ್ನೂ ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬೀಳಲಿದ್ದು, ಶಿವಮೊಗ್ಗದಿಂದ ಪಕ್ಷೇತರರಾಗಿ ಸ್ಪರ್ಧಿಸಿರುವ ಈಶ್ವರಪ್ಪ ಈ ಚುನಾವಣೆಯಲ್ಲಿ ಗೆಲ್ಲಿಸು ಎಂದು ದೇವರಲ್ಲಿ ಬೇಡಿಕೊಂಡಿದ್ದಾರೆ ಎಂದು ಅಪ್ತ ಮೂಲಗಳು ತಿಳಿಸಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net