ಶಿವಪೂಜಾ ಪ್ರಾತ್ಯಕ್ಷಿಕೆ ಸಮಾರೋಪ

28-08-Shiva-6
ರಾಯಚೂರಿನ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಶಿವಪೂಜಾ ಪ್ರಾತ್ಯಕ್ಷಿಕೆ ಸಮಾರೋಪ ಸಮಾರಂಭದಲ್ಲಿ ಮಂಗಳವಾರಪೇಟೆ ಹಿರೇಮಠದ ವೀರ ಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ ಭಾನುವಾರ ಸಂಜೆ ಆಶೀರ್ವಚನ ನೀಡಿದರು. ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಭೂಪಾಲ ನಾಡಗೌಡ, ಪದಾಕಾರಿಗಳಾದ ಕಲ್ಲಯ್ಯಸ್ವಾಮಿ, ಮಲ್ಲಿಕಾರ್ಜುನ ಬಂಡಿ, ನಿವೃತ್ತ ಪ್ರಾಚಾರ್ಯ ಡಾ.ಪರಮೇಶ್ವರಪ್ಪ ಸಾಲಿಮಠ ಇದ್ದರು.
Published on

ರಾಯಚೂರು: ನಗರದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದಿಂದ ಹಮ್ಮಿಕೊಂಡಿದ್ದ ಶಿವಪೂಜಾ ಪ್ರಾತ್ಯಕ್ಷಿಕೆ ಹಾಗೂ ಸಾಮೂಹಿಕ ಇಷ್ಟಲಿಂಗ ಪೂಜೆ ಕಾರ್ಯಕ್ರಮ ಭಾನುವಾರ ಸಂಜೆ ಮುಕ್ತಾಯಗೊಂಡಿತು.
ದೇವಸ್ಥಾನದಲ್ಲಿ ಐದು ದಿನಗಳ ಕಾಲ ಯುವಜನರಿಗೆ ಶಿವಪೂಜೆ, ಇಷ್ಟಲಿಂಗ ಪೂಜೆಯ ವಿ ವಿಧಾನಗಳನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಪ್ರತಿದಿನ ಸಂಜೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಸ್ಮ ಧರಿಸುವುದರಿಂದ ಆಗುವ ಲಾಭಗಳೇನು, ಪತ್ರಿ, ಪುಷ್ಪ, ಧೂಪ, ದೀಪಗಳ ಪ್ರಯೋಜನಗಳೇನು ಎನ್ನುವ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಿಸಲಾಯಿತು.
ಸಮಾರೋಪ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿದ್ದ ಮಂಗಳವಾರಪೇಟೆ ಹಿರೇಮಠದ ವೀರ ಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಆಶೀರ್ವಚನ ನೀಡಿ, ಇಂದಿನ ಯುವ ಪೀಳಿಗೆ ಧರ್ಮ ಮಾರ್ಗದಲ್ಲಿ ನಡೆಯುವ ಮೂಲಕ ನಮ್ಮ ಆಚಾರ, ವಿಚಾರ, ಪೂಜಾ ವಿವಿಧಾನಗಳ ಬಗ್ಗೆ ಅರಿತುಕೊಂಡಿರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಭೂಪಾಲ ನಾಡಗೌಡ, ಪದಾಕಾರಿಗಳಾದ ಅಶೋಕಪಾಟೀಲ್ ಅತ್ತನೂರು, ಶಿವಾನಂದ ಚುಕ್ಕಿ, ಬಸವರಾಜ, ಕಲ್ಲಯ್ಯಸ್ವಾಮಿ, ಮಲ್ಲಿಕಾರ್ಜುನ ಬಂಡಿ, ನಿವೃತ್ತ ಪ್ರಾಚಾರ್ಯ ಡಾ.ಪರಮೇಶ್ವರಪ್ಪ ಸಾಲಿಮಠ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net