ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಿ

aa842fd2-8bf2-4ff4-b59e-2539aff637d2
Published on

ಮೈಸೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು ಇಡಬೇಕು ಎಂದು ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟ್ ಆಗ್ರಹಿಸಿದೆ.


ಈ ನಿಲ್ದಾಣಕ್ಕೆ ಕುವೆಂಪು ಹೆಸರು ನಾಮಕರಣ ಮಾಡಬೇಕೆಂಬುದು ಸಾಹಿತಿಗಳ ಹಾಗೂ ಜನರ ಬೇಡಿಕೆಯಾಗಿದೆ. ಕುವೆಂಪು ರಾಜ್ಯಕ್ಕೆ ಪ್ರಥಮವಾಗಿ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟವರು. ಸಾವಿರಾರು ಪ್ರಶಸ್ತಿ ಪುರಸ್ಕೃತರೂ ಆಗಿದ್ದಾರೆ. ಕನ್ನಡ ನಾಡು, ಇಡೀ ಸಾಹಿತ್ಯ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಶಿವಮೊಗ್ಗ ಸಹ ಅವರದೇ ಜಿಲ್ಲೆಯಾಗಿರುವ ಹಿನ್ನೆಲೆಯಲ್ಲಿ ಅಲ್ಲಿನ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡುವುದು ಸೂಕ್ತ ಎಂದು ಟ್ರಸ್ಟ್‌ನ ಪರವಾಗಿ ಹಿರಿಯ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.


ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ತಮ್ಮ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡುವುದನ್ನು ವಿರೋಧಿಸಿದ್ದಾರೆ. ಹೀಗಾಗಿ, ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಬೇಕು ಎಂದವರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net