ಶಿಶು, ತಾಯಿ ಮರಣ ತಡೆಗಟ್ಟಿ

oplus_2
oplus_2
Published on

ಚಿತ್ರದುರ್ಗ: ಕ್ಷೇತ್ರ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ತರಬೇತಿಯ ಪ್ರಯೋಜನ ಪಡೆದು ತಾಯಿ, ಶಿಶು ಮರಣ ತಪ್ಪಿಸುವ ಕಡೆ ಕಾರ್ಯೋನ್ಮುಖರಾಗಬೇಕು ಎಂದು ಡಿಎಚ್‌ಒ ಡಾ.ಜಿ.ಪಿ. ರೇಣುಪ್ರಸಾದ್ ಹೇಳಿದರು.

ಜಿಲ್ಲಾಡಳಿತ, ಜಿಪಂ,ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಬೆಂಗಳೂರು ಕೆಎಚ್‌ಪಿಟಿ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಐಸಿಎಂಆರ್ ಪ್ರಾಜೆಕ್ಟ್ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಮಕ್ಕಳ ಅಪೌಷ್ಟಿಕತೆ ಸರಿದೂಗಿಸುವಿಕೆ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಸಿಬ್ಬಂದಿ ತರಬೇತಿಯ ಪ್ರಯೋಜನ ಪಡೆದು ಶಿಶು, ತಾಯಿ ಮರಣ ತಪ್ಪಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಮಾತನಾಡಿ, ಮಕ್ಕಳಲ್ಲಿ ಕಂಡುಬರುವ ಅಪೌಷ್ಟಿಕತೆ ತೊಲಗಿಸೋಣ. ತಾಯಿ, ಶಿಶು ಮರಣ ತಪ್ಪಿಸೋಣ ಎಂದರು.

ಸೆಂಟ್ ಜಾನ್ಸ್ ಆಸ್ಪತ್ರೆ ಡಾ. ಆಯಿಷಾ ಪ್ರಾಸ್ತಾವಿಕವಾಗಿ ಮಾತನಾಡಿದರು. ವೈದ್ಯರಾದ ಡಾ. ಜ್ಯೋತಿ, ಡಾ. ಶಶಿಕಿರಣ್, ಚಿತ್ರದುರ್ಗ ಐಸಿಎಂಆರ್ ಪ್ರಾಜೆಕ್ಟ್ ಸಂಯೋಜಕಿ ಬಿ. ವೀಣಾ, ಪೋಷಣ್ ಅಭಿಯಾನದ ಜಿಲ್ಲಾ ವ್ಯವಸ್ಥಾಪಕ ಕರ್ಕಪ್ಪಮೇಟಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ, ಬಿ. ಜಾನಕಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net