

ಚಾಮರಾಜನಗರ: ಸ್ವಾತಂತ್ರೃ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಎಲ್ಲರ ಪಾಲ್ಗೊಳ್ಳುವಿಕೆ ಮುಖ್ಯವಾಗಿರುತ್ತದೆ. ಶಿಷ್ಟಾಚಾರ ಉಲ್ಲಂಘನೆ ಆಗದಂತೆ ಅಧಿಕಾರಿಗಳು ನೋಡಿ ಕೊಳ್ಳಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.
ಕೊಳ್ಳೇಗಾಲ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಸ್ವಾತಂತ್ರೋತ್ಸವ ಅಂಗವಾಗಿ ಅಯೋಜಿಸಿದ್ದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು.
ಮುಖ್ಯರಸ್ತೆ ಹಾಗೂ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಬೇಕು. ಈ ಬಾರಿ ಸರ್ಕಾರಿ ಎಂಜಿಎಸ್‌ವಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಕಾರ್ಯಕ್ರಮ ಜವಾಬ್ದಾರಿಯನ್ನು ಪ್ರತಿ ಇಲಾಖೆ ಅಧಿಕಾರಿಗಳು ವಹಿಸಬೇಕು. ರಾಷ್ಟ್ರೀಯ ಹಬ್ಬಗಳ ಸಮಿತಿ ಜತೆ ಎಲ್ಲರೂ ಕೈ ಜೋಡಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಸಾರ್ವಜನಿಕರ ವೀಕ್ಷಣೆಗಾಗಿ ಅವಕಾಶ ಕಲ್ಪಿಸಬೇಕು. ಪಥ ಸಂಚಲನ ಆಕರ್ಷಿಸುವಂತೆ ಇರಲು ಸಿದ್ಧತೆಕೈಗೊಳ್ಳಬೇಕು ಎಂದರು. ಪೂರ್ವಭಾವಿ ಸಭೆಗೆ ಬಹುತೇಕ ಇಲಾಖೆ ಅಧಿಕಾರಿಗಳು ಹಾಜರಿರಲಿಲ್ಲ. ಅಧೀನ ಸಿಬ್ಬಂದಿಗಳು ಹಾಜರಾಗಿದ್ದರು. ಇದರಿಂದ ಸಿಟ್ಟಾದ ಶಾಸಕರು ಗೈರಾದ ಅಧಿಕಾರಿಗಳಿಗೆ ನೊಟೀಸ್ ನೀಡುವಂತೆ ತಹಸೀಲ್ದಾರ್‌ಗೆ ಸೂಚಿಸಿದರು.
ತಾಲೂಕು ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ವೈದ್ಯರು ಸಕಾಲಕ್ಕೆ ಹಾಜರಾಗುತ್ತಿಲ್ಲ ಎಂಬ ದೂರಿದೆ. ಎಚ್ಚರಿಕೆ ವಹಿಸುವಂತೆ ಸೂಚಿಸಿದರು.ತಹಸೀಲ್ದಾರ್ ಮಂಜುಳ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳ, ಇಒ ಉಮೇಶ್, ರೈತ ಮುಖಂಡ ಅಣಗಳ್ಳಿ ಬಸವರಾಜು, ತೋಟೇಶ್, ಆರೋಗ್ಯಾಧಿಕಾರಿ ಗೋಪಾಲ್ ಇದ್ದರು.