ಶಿಷ್ಯ ವೇತನಕ್ಕೆ ಅರ್ಜಿ

application
Published on

ಚಿತ್ರದುರ್ಗ: ಕಳೆದ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಐಐಎಸ್‌ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ಪ್ರವೇಶ ಪಡೆದು, ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ, 200 ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಂದ ಶಿಷ್ಯ ವೇತನಕ್ಕೆ ಏ. 11 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ವಿದ್ಯಾರ್ಥಿಗೂ 15 ಸಾವಿರ ರೂ.ಶಿಷ್ಯವೇತನ ನೀಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು (08194-225427) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

---------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net