ಶಿಷ್ಯವೇತನಕ್ಕೆ ಅರ್ಜಿ

3b349506-2ca9-4b52-a032-f5dd4be98e72--100
Published on

ಚಿತ್ರದುರ್ಗ: ಪ್ರಸಕ್ತ ಸಾಲಿನ ಒಂದನೇ ತರಗತಿಯಿಂದ ಅಂತಿಮ ಪದವಿ,ಡಿಪ್ಲೊಮಾ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಂದ(ಅಧಿಕಾರಿಗಳನ್ನು ಹೊರತುಪಡಿಸಿ)ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಯಲ್ಲಿ ಶುಲ್ಕ ರಹಿತ ಅರ್ಜಿ ಲಭ್ಯವಿದೆ. 1ನೇ ತರಗತಿಯಿಂದ ಅಂತಿಮ ಪದವಿ,ಡಿಪ್ಲೊಮಾ ವಿದ್ಯಾರ್ಥಿಗಳು ಸೆಪ್ಟೆಂಬರ್ 30 ಹಾಗೂ ವೃತ್ತಿಪರ ಪದವಿ ವಿದ್ಯಾರ್ಥಿಗಳು ಅಕ್ಟೋಬರ್ 30ರೊಳಗೆ ಶಿವಮೊಗ್ಗ ಸೈನಿಕ ಕ ಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಗೆ ಸಲ್ಲಿಸ ಬೇಕು. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿ ದೂರವಾಣಿ ಸಂಖ್ಯೆ 08182-220925 ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net