

ಚಿತ್ರದುರ್ಗ: ದ್ವಿತೀಯ ಪಿಯುಸಿಯಲ್ಲಿ ಶೇ. 60ಕ್ಕೂ ಅಧಿಕ ಅಂಕಗಳೊಂದಿಗೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ, ಭಾರತೀಯ ಸೇನೆಯ ಜೆಸಿಒ ರ‌್ಯಾಂಕ್‌ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆ ತತ್ಸಮಾನ ರ‌್ಯಾಂಕ್ ವರೆಗಿನ ಮಾಜಿ ಸೈನಿಕರ ಮಕ್ಕಳಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆಯಡಿ ನ. 30ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ ಏಖ://ಘೆಔಐಘೆಉ.ಓಖಆ.ಎಣ್ಖ.ಐಘೆ ವನ್ನು ಅಥವಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
---