ಶಿಸ್ತು-ತಾಳ್ಮೆಯಿಂದ ಬದುಕು ಕಟ್ಟಿಕೊಳ್ಳಿ

06-jan-hdl-01
Published on

ಹೂವಿನಹಡಗಲಿ: ಶರಣರು ಮತ್ತು ದಾರ್ಶನಿಕರ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಶಿಸ್ತು ಮತ್ತು ತಾಳ್ಮೆಯಿಂದ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ ಹೇಳಿದರು.

ಪಟ್ಟಣದ ಗವಿಮಠದಲ್ಲಿ ಆಯೋಜಿಸಿದ್ದ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಭಾನುವಾರ ಮಾತನಾಡಿದರು. ಇಂದು ಅನೇಕರು ಖಿನ್ನತೆಗೆ ಒಳಗಾಗುತ್ತಿದ್ದಾರೆ. ಅದಕ್ಕೆ ನಮ್ಮ ಇಂದಿನ ಜೀವನ ಕ್ರಮವೇ ಕಾರಣವಾಗಿದೆ. ವ್ಯಸನ, ಮೂಢನಂಬಿಕೆ, ಅಂಧ ಶ್ರದ್ಧೆ ಮತ್ತು ಶೋಷಣೆ ಮುಕ್ತ ಸಮಾಜವನ್ನು ಕಟ್ಟುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net