ಶಿಸ್ತು, ನಾಯಕತ್ವ ಗುಣ ಬೆಳೆಸಿಕೊಳ್ಳಿ

1407 KLB 04
Published on

ಕಲಬುರಗಿ: ವಿದ್ಯಾರ್ಥಿಗಳು ಶಿಸ್ತು ಮತ್ತು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು. ದೇಶದ ಸೇವೆಗಾಗಿ ಸದಾ ಸಜ್ಜಾಗಿರಬೇಕು. ಸತತ ಪ್ರಯತ್ನ ಮತ್ತು ಶ್ರದ್ಧೆಯಿಂದ ಜೀವನದಲ್ಲಿ ಸಾಧನೆ ಸಾಧ್ಯ ಎಂದು ಇಂಡೋ ಟಿಬೇಟಿಯನ್ ಬಾರ್ಡ್ರ್ ಪೊಲೀಸ್‌ನ ಸಹಾಯಕ ಕಮಾಂಡAಟ್ ವೈದ್ಯಾಧಿಕಾರಿ ಡಾ.ಹರ್ಷವರ್ಧನ ಆರ್.ಎಸ್. ಹೇಳಿದರು.
ನಗರದ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ವಿದ್ಯಾರ್ಥಿ ಮಂಡಳಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿ ಮಂಡಳಿಗೆ ಆಯ್ಕೆಯಾದವರು ಶಾಲೆಯ ಮೌಲ್ಯ ಮತ್ತು ಶಾಲೆ ಸಮುದಾಯದ ಪ್ರಗತಿಗೆ ಶ್ರಮಿಸಬೇಕು. ಮೌಲ್ಯಗಳನ್ನು ಅರಿತು ಜೀವನ ಸಾಗಿಸಬೇಕು ಎಂದು ಸಲಹೆ ನೀಡಿದರು.
ಉಪನ್ಯಾಸಕ ಡಾ.ಚಂದ್ರಕಾAತ ಪಾಟೀಲ್ ಮಾತನಾಡಿ, ಮಕ್ಕಳು ಜೀವನದಲ್ಲಿ ನೈತಿಕತೆ ಹೊಂದಬೇಕು. ಸಾಹಿತ್ಯವನ್ನು ಅಧ್ಯಯನ ಮಾಡಬೇಕು. ಜೀವನದಲ್ಲಿ ಉನ್ನತ ಗುರಿ ಇಟ್ಟು ಸಾಗಿದಾಗ ಮಾತ್ರ ಯಶಸ್ಸು ದೊರೆಯಲು ಸಾಧ್ಯ ಎಂದು ಹೇಳಿದರು.
ಹಿರಿಯ ಅಧ್ಯಾಪಕಿ ಶಾರದಾ ರಾಂಪುರೆ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಎನ್.ಎಸ್.ದೇವರಕಲ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಸ ವಿದ್ಯಾರ್ಥಿ ನಾಯಕರ ನೇಮಕವನ್ನು ಆಚರಿಸಲಾಯಿತು. ಶಾಲೆ ಮೇಲ್ವಿಚಾರಕ ಶಂಭುಲಿAಗ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net