

ಅಳವಂಡಿ: ವಿದ್ಯಾರ್ಥಿಗಳು ಪರಿಶ್ರಮದಿಂದ ಓದಿ ಸಾಧನೆ ಶಿಖರವನ್ನೇರಬೇಕು ಎಂದು ಹಿಟ್ನಾಳದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಪ್ರಾಚಾರ್ಯ ಶಿ.ಗು.ಹಿರೇಮಠ ಹೇಳಿದರು.
ಹನಕುಂಟಿ ಗ್ರಾಮದ ಹಿಂದುಳಿದ ವರ್ಗಗಳ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸರಸ್ವತಿ ಪೂಜೆ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಶಿಕ್ಷಕರ ಕರ್ತವ್ಯ. ಆದರೆ, ಅದರ ಸದುಪಯೋಗ ಪಡಿಸಿಕೊಳ್ಳುವುದರ ಜತೆಗೆ ಶಿಸ್ತು, ಸಂಯಮ ರೂಢಿಸಿಕೊಳ್ಳುವುದು ಶಿಕ್ಷಣದ ಮೊದಲನೇ ಹಂತ ಎಂದರು.
ನಂತರ ಪ್ರಸಕ್ತ ಸಾಲಿನ ಆದರ್ಶ ವಿದ್ಯಾರ್ಥಿಗಳಾದ ಶಿವರಾಜ, ಆದರ್ಶ, ನಂದಿತಾ ಹಾಗೂ ಕಳೆದ ವರ್ಷ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಪಡೆದ ನಾಗರಾಜ, ರವಿ ಅವರನ್ನು ಸನ್ಮಾನಿಸಲಾಯಿತು.