ಶಿಸ್ತುಬದ್ಧ ಜೀವನ ಮೈಗೂಡಿಸಿಕೊಳ್ಳಿ

03krp-01
ಕೆ.ಆರ್.ಪೇಟೆ ತಾಲೂಕಿನ ಮಾರ್ಗೋನಹಳ್ಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಸ್ವಾಮಿ ವಿಜಯಾನಂದ ಸರಸ್ವತಿ ಮಹಾರಾಜ್ ಪ್ರವಚನ ನೀಡಿದರು.
Published on

ಕೆ.ಆರ್.ಪೇಟೆ: ಸತತ ಅಧ್ಯಯನ ಹಾಗೂ ಶಿಸ್ತುಬದ್ಧ ಜೀವನ ಮೈಗೂಡಿಸಿಕೊಂಡಿದರೆ ಏನು ಬೇಕಾದರೂ ಸಾಧಿಸಬಹುದು ಎಂದು ಧಾರವಾಡದ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವಿಜಯಾನಂದ ಸರಸ್ವತಿ ಮಹಾರಾಜ್ ಹೇಳಿದರು.

ತಾಲೂಕಿನ ಮಾರ್ಗೋನಹಳ್ಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ನಿರ್ಮಾಣಂ ಮೌಲ್ಯಶಿಕ್ಷಣ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.

ಸ್ವಾಮಿ ವಿವೇಕಾನಂದರು ಯುವಕರಿಗೆ ಸದಾ ಸ್ಫೂರ್ತಿಯ ಚಿಲುಮೆಯಾಗಿದ್ದಾರೆ. ಅವರ ಆದರ್ಶನಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಂಡರೆ ಸದೃಢ ಭಾರತ ನಿರ್ಮಾಣವಾಗಲಿದೆ ಎಂದರು.

ನಿರ್ಮಾಣಂ ಮೌಲ್ಯಶಿಕ್ಷಣ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದ 8 ರಿಂದ 10 ತರಗತಿಯ ತಲಾ ಮೂರು ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ವಿತರಿಸಲಾಯಿತು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಿ.ರಂಗೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ವಿಸ್ತರಣಾಧಿಕಾರಿ ಎಂ.ಎನ್.ವೆಂಕಟೇಶ್, ವಸತಿ ಶಾಲೆಯ ಪ್ರಾಂಶುಪಾಲ ಡಾ.ಕೆ.ರಾಮನಾಯಕ್, ನಿಲಯ ಪಾಲಕರಾದ ಡಿ.ಕೆ.ಪ್ರದೀಪ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net