ಶೀಘ್ರ ಸರ್ವೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭ

CTD SARAKRI NVAKRRA DINa.
Published on

ಚಿತ್ರದುರ್ಗ: ರಾಜ್ಯ ಸರ್ಕಾರಿ ನೌಕರರ ದಿನವನ್ನು ನಗರದ ರಾಜ್ಯಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಸಾಂಕೇತಿಕವಾಗಿ ಆಚರಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಮಾಲತೇಶ ಮುದ್ದಜ್ಜಿ ಮಾತನಾಡಿ, ಪ್ರತಿ ವರ್ಷ ಏ.21 ರಂದು ಸರ್ಕಾರಿ ನೌಕರರ ದಿನವನ್ನು ಆಚರಿಸಲಾಗುತ್ತಿದೆ. ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಅದೇ ದಿನ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಜಿಲ್ಲೆಯಲ್ಲಿ 2023-24 ಹಾಗೂ 2024-25ನೇ ಸಾಲಿನದೂ ಸೇರಿ ಎರಡು ವರ್ಷಗಳ ಪ್ರಶಸ್ತಿ ಪ್ರದಾನ ಬಾಕಿ ಇದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ದಿನಾಂಕ ಪಡೆದು, ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರೊಂದಿಗೆ ಚರ್ಚಿಸಿ,ಜಿಲ್ಲಾ ಕೇಂದ್ರದಲ್ಲಿ ನೌಕರರ ದಿನವನ್ನು ಅದ್ದೂ ರಿಯಾಗಿ ಶೀಘ್ರವೇ ಆಚರಿಸಲಾಗುವುದು. ಇದೇ ವೇಳೆ ಸರ್ವೋತ್ತಮ ಸೇವಾ ಪ್ರಶಸ್ತಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಪ್ರದಾನ ಮಾಡಲಿದ್ದಾರೆ ಎಂದರು.

ಸಂಘದ ಜಿಲ್ಲಾ ಗೌರವಾಧ್ಯಕ್ಷ ಎಂ.ನಾರಾಯಣಸ್ವಾಮಿ, ಕಾರ‌್ಯದರ್ಶಿ ಆರ್.ಶ್ರೀನಿವಾಸ, ಖಜಾಂಚಿ ಮಲ್ಲಿಕಾರ್ಜುನ,ರಾಜ್ಯಪರಿಷತ್ ಸದಸ್ಯ ಎಸ್.ರಾಜಪ್ಪ,ಉಪಾಧ್ಯಕ್ಷ ಕೆ.ಪ್ರಕಾಶ್,ಜಂಟಿ ಕಾರ‌್ಯದರ್ಶಿ ಮಾರುತಿ, ತಿಪ್ಪೇಸ್ವಾಮಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net