ಶೀಘ್ರದಲ್ಲೇ ಸಮಸ್ಯೆಗಳಿಗೆ ಮುಕ್ತಿ

07 vtp1 MLA Boomi Pooje
ಪಟ್ಟಣದ ಪುರಸಭೆ ವ್ಯಾಪ್ತಿಯ ಮೊಗರಗಲ್ಲಿ ಕೊಳಚೆ ಪ್ರದೇಶದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಭೂಮಿಪೂಜೆ ನೆರವೇರಿಸಿದರು.
Published on

ವಿರಾಜಪೇಟೆ: ಪಟ್ಟಣದ ಪುರಸಭೆ ವ್ಯಾಪ್ತಿಯ ಮೊಗರಗಲ್ಲಿ ಕೊಳಚೆ ಪ್ರದೇಶದಲ್ಲಿ ಒಳಚರಂಡಿ ಹಾಗೂ ಬೀದಿ ದೀಪ ಸಮಸ್ಯೆ ಇದ್ದು, ಶೀಘ್ರದಲ್ಲೇ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು.


ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 75 ಲಕ್ಷ ರೂ. ವೆಚ್ಚದಲ್ಲಿ ಮಳೆ ನೀರಿನ ಚರಂಡಿ ನಿರ್ಮಾಣ ಕಾಮಗಾರಿಗೆ ಇತ್ತೀಚೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಪರಿಣಾಮ ರಸ್ತೆಗಳು ಹಾಳಾಗುತ್ತಿದೆ. ಚರಂಡಿ ಹಾಗೂ ರಸ್ತೆಗಳನ್ನು ಪುರಸಭೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದರು.

ಪುರಸಭೆ ಅಧ್ಯಕ್ಷೆ ಸುಶ್ಮಿತಾ, ಸದಸ್ಯರಾದ ಎಂ.ಕೆ.ದೇಚಮ್ಮ, ಎಸ್.ಎಚ್.ಮತೀನ್, ಡಿ.ಪಿ.ರಾಜೇಶ್, ರಜನಿಕಾಂತ್, ಸುನೀತಾ ಜೂನಾ, ತಸ್ನಿಂ ಅಕ್ತರ್, ಅನಿತಾ, ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲ ಇಂಜಿನಿಯರ್ ಎಸ್.ತೇಜಶ್ರೀ, ಜವಹರ್ ಜೋಗಿ, ಮುಖ್ಯಾಧಿಕಾರಿ ಚಂದ್ರಕುಮಾರ್, ಇಂಜಿನಿಯರ್ ಹೇಮ್‌ಕುಮಾರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net