ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

17 HANUR 1
ಕುರಟ್ಟಿ ಹೊಸೂರು ಗ್ರಾಮದಲ್ಲಿ ನಿರ್ಮಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕವನ್ನು ಬಿಜೆಪಿ ಒಬಿಸಿ ಮೋರ್ಚಾದ ಜಿಲ್ಲಾ ಸಂಯೋಜಕ ಬಿ.ವೆಂಕಟೇಶ್ ಉದ್ಘಾಟಿಸಿದರು.
Published on

ಹನೂರು: ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ನಿರ್ಮಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕವನ್ನು ಬಿಜೆಪಿ ಒಬಿಸಿ ಮೋರ್ಚಾದ ಜಿಲ್ಲಾ ಸಂಯೋಜಕ ಬಿ.ವೆಂಕಟೇಶ್ ಉದ್ಘಾಟಿಸಿದರು.
ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಗ್ಗಾಗ್ಗೆ ಕುಡಿಯುವ ನೀರಿನ ಸಮಸ್ಯೆ ತಲೆದೂರುತ್ತಿತ್ತು. ಅಲ್ಲದೆ ಬೇಸಿಗೆ ಬಂತೆಂದರೆ ನೀರಿಗಾಗಿ ಅಲೆದಾಡುವಂತಹ ಪರಿಸ್ಥಿತಿ ಇತ್ತು. ಗ್ರಾಮಸ್ಥರು ಕುಡಿಯುವ ನೀರಿನ ಸೌಕರ್ಯ ಕಲ್ಪಿಸುವಂತೆ ಮನವಿ ಮಾಡಿದ್ದರು. ಈ ದಿಸೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದೆ. ಇದರಿಂದ ಜನರಿಗೆ ಅನುಕೂಲವಾಗಲಿದೆ. ಗ್ರಾಮದ ಮೂಲ ಸೌಕರ್ಯ ಸಮಸ್ಯೆಗಳೇನಾದರೂ ಇದ್ದಲ್ಲಿ ನೆರವಾಗುವುದಾಗಿ ಭರವಸೆ ನೀಡಿದರು.ಇದೇ ವೇಳೆ ನೀರು ಸಂಗ್ರಹಿಸಿಟ್ಟುಕೊಳ್ಳುವ 20ಲೀಟರ್‌ನ 500 ಕ್ಯಾನ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ, ಸದಸ್ಯರಾದ ಕೆಂಪರಾಜಪ್ಪ, ವೆಂಕಟಮ್ಮ, ಕೃಷ್ಣ, ಪ್ರಕಾಶ್, ಮುರುಗೇಶ್ ಮುಖಂಡರಾದ ರಾಮ್‌ಕುಮಾರ್, ಪಳನಿಸ್ವಾಮಿ, ಶಿವಣ್ಣ, ಮುನಸಿದ್ಧ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net