ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

7 bannur 1.
ಬನ್ನೂರು ಸಮೀಪದ ಚಾಮನಹಳ್ಳಿಯ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಉದ್ಘಾಟಿಸಿದರು. ಜೆ.ಸುನಿತಾ ವೀರಪ್ಪಗೌಡ, ಡಾ.ಮಹೇಂದ್ರಸಿಂಗ್ ಕಾಳಪ್ಪ, ವಿಜಯ್‌ಕುಮಾರ್, ಸುರೇಶ್, ಉಮೇಶ್ ಇತರರಿದ್ದರು.
Published on

ಬನ್ನೂರು: ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರಿನ ಅವಶ್ಯಕತೆ ಇದ್ದು, ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಘಟಕವನ್ನು ಸ್ಥಾಪಿಸಿರುವುದು ಶ್ಲಾಘನೀಯ ಎಂದು ಶ್ರೀ ಸೋಮೇಶ್ವರನಾಥ ಸ್ವಾಮೀಜಿ ತಿಳಿಸಿದರು.

ಪಟ್ಟಣದ ಸಮೀಪದ ಚಾಮನಹಳ್ಳಿಯ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿ, ಕಲುಷಿತ ನೀರಿನಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರಿಸರ ಜಾಗೃತಿ ವೇದಿಕೆ ಅಧ್ಯಕ್ಷ ಡಾ.ಮಹೇಂದ್ರಸಿಂಗ್ ಕಾಳಪ್ಪ ಅವರು ಶಿಕ್ಷಣ ಸಂಸ್ಥೆಗೆ ಸೌಲಭ್ಯ ನೀಡಿದ್ದಾರೆ. ಮಕ್ಕಳು ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಮಾಜಿ ಶಾಸಕಿ ಜೆ.ಸುನೀತಾ ವೀರಪ್ಪಗೌಡ, ಪರಿಸರ ಜಾಗೃತಿ ವೇದಿಕೆ ಅಧ್ಯಕ್ಷ ಡಾ.ಮಹೇಂದ್ರಸಿಂಗ್ ಕಾಳಪ್ಪ, ವಿಜಯ್‌ಕುಮಾರ್, ಸುರೇಶ್, ಉಮೇಶ್, ವೈ.ಎಸ್.ರಾಮಸ್ವಾಮಿ, ಅಶ್ವತ್ಥ್, ಆನಂದ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net