ಶುದ್ಧ ಕುಡಿವ ನೀರು ಪೂರೈಕೆಗೆ ತಾಕೀತು

2--0005
??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಚಿತ್ರದುರ್ಗ: ಬರಪೀಡಿತ ಪ್ರತಿ ತಾಲೂಕುಗಳಲ್ಲಿ ಕುಡಿವ ನೀರು ಸಮಸ್ಯೆ ಆಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿಇಒ ಎಸ್.ಜೆ. ಸೋಮಶೇಖರ್ ಸೂಚಿಸಿದರು.
ಜಿಪಂ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲೆಯ ಬರ ಪೀಡಿತ ತಾಲೂಕುಗಳಲ್ಲಿ 2.70 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ತುರ್ತು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಕ್ರಿಯಾಯೋಜನೆ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮೊದಲ ಹಂತದಲ್ಲಿ 25 ಲಕ್ಷ ರೂ. ಗಳಂತೆ ಜಿಲ್ಲೆಗೆ 1.50 ಕೋಟಿ ರೂ., 2ನೇ ಹಂತದಲ್ಲಿ 20 ಲಕ್ಷ ರೂ. ಗಳಂತೆ 1.20 ಕೋಟಿ ರೂ. ಹಾಗೂ 3ನೇ ಹಂತದಲ್ಲಿ 60.69 ಲಕ್ಷ ರೂ. ಗಳಂತೆ 3.64 ಕೋಟಿ ರೂ.ಮಂಜೂರು ಮಾಡಿತ್ತು ಎಂದರು.
ಜಲ ಜೀವನ್‌ಮಿಷನ್ ಯೋಜನೆಯಡಿ ಮನೆ,ಮನೆಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ಸಮಯದಲ್ಲಿ ಗ್ರಾಮಾಂತರ ಪ್ರದೇಶದ ಶಾಲೆ, ಆಸ್ಪತ್ರೆ, ಅಂಗನವಾಡಿ, ಹಾಸ್ಟೆಲ್‌ಗಳಿಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವಂತೆ ಸೂಚಿಸಿದರು.
ಮೊದಲ ಹಂತದ ಅನುದಾನದಲ್ಲಿ ಜಿಲ್ಲೆಯ ಆರು ತಾಲೂಕುಗಳಲ್ಲಿ 94 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. 2ನೇ ಹಂತದ ಅನುದಾನದಲ್ಲಿ 88 ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಹಾಗೂ 3ನೇ ಹಂತದ ಅನುದಾನಕ್ಕೆ ಸಂಬಂಧಿಸಿದಂತೆ ಮೊಳಕಾಲ್ಮೂರು ತಾಲೂಕು ರಾಂಪುರ ಹಾಗೂ ಇತರ ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಹೊಸ ಪೈಪ್‌ಲೈನ್ 60.60 ಲಕ್ಷ ರೂ. ವೆಚ್ಚದ 10 ಕಾಮಗಾರಿಗಳ ಕ್ರಿಯಾಯೋಜನೆಗಳಿಗೆ ಸಭೆ ಅನುಮೋದನೆ ನೀಡಿತು.
ಜಿಪಂ ಉಪ ಕಾರ‌್ಯದರ್ಶಿ ಕೆ.ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸವನಗೌಡ ಪಾಟೀಲ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ್, ಡಿಸಿಎಫ್ ಟಿ.ರಾಜಣ್ಣ, ಪ್ರಭಾರ ಡಿಡಿಪಿಐ ಎಂ.ನಾಸೀರುದ್ದೀನ್, ಪರಿಶಿಷ್ಟ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ಒ.ಪರಮೇಶ್ವರಪ್ಪ, ಡಾ.ಚಂದ್ರಶೇಖರ್ ಕಂಬಾಳಿಮಠ ಮತ್ತಿತರ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net