ಶುದ್ಧ ನೀರಿನ ಘಟಕ ನಿರ್ಮಾಣಕ್ಕೆ ಶಾಸಕ ಭೂಮಿಪೂಜೆ

8 vpt 1
Published on

ವಿರಾಜಪೇಟೆ: ವಿರಾಜಪೇಟೆ ನಗರದ ಒಂದನೇ ವಾರ್ಡ್‌ನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸೋಮವಾರ ಭೂಮಿಪೂಜೆ ನೆರವೇರಿಸಿದರು.

ಜನಸಾಮಾನ್ಯರಿಗೆ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರ ಅನುದಾನ 10 ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರು ಘಟಕಕ್ಕೆ ಮಂಜೂರಾತಿ ನೀಡಲಾಗಿದೆ. ಶುದ್ಧ ಕುಡಿಯುವ ನೀರು ಪ್ರತಿಯೊಬ್ಬರ ಅವಶ್ಯಕತೆ. ಜನರು ಮಿತವಾಗಿ ನೀರನ್ನು ಬಳಸಿ ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಉಪಾಧ್ಯಕ್ಷೆ ಫಸಿಯಾ ತಬ್ಬುಂ, ಪುರಸಭೆ ಸದಸ್ಯರು, ಕಾಂಗ್ರೆಸ್ ಮುಖಂಡರು, ಸ್ಥಳೀಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net