ಶುದ್ಧ ನೀರು ಪೂರೈಕೆಯತ್ತ ಇರಲಿ ಚಿತ್ತ

CTD ZP CEO----
Published on

ಚಿತ್ರದುರ್ಗ: ಕಲುಷಿತ ನೀರು ಸೇವನೆಯಿಂದ ಸಂಭವಿಸಬಹುದಾದ ದುರ್ಘಟನೆಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡಬಾರದು ಎಂದು ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಅಧಿಕಾರಿಗಳನ್ನು ಎಚ್ಚರಿಸಿದರು.
ಜಿಪಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಜಿಪಂದಲ್ಲಿ ಬುಧವಾರ ಏರ್ಪಡಿಸಿದ್ದ ಫೀಲ್ಡ್ ಟೆಸ್ಟ್ ಕಿಟ್ ಮತ್ತು ಎಚ್ ಟು ಎಸ್ ವಯಲ್ಸ್ ಉಪಯೋಗಿಸಿ ನಡೆಸುವ ನೀರಿನ ಸ್ಯಾಂಪಲ್ಸ್ ಪರೀಕ್ಷೆಯ ತರಬೇತಿ ಕಾರ‌್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮಳೆಗಾಲದ ಈ ಸಂದರ್ಭದಲ್ಲಿ ಕುಡಿವ ನೀರಿನ ಮೂಲಗಳೆಡೆ ವಿಶೇಷವಾಗಿ ನಿಗಾ ವಹಿಸಬೇಕು. ಶುದ್ಧ ನೀರು ಪೂರೈಸಲು ಗಮನಹರಿಸಬೇಕು ಎಂದು ತಾಕೀತು ಮಾಡಿದರು.
ಜಿಪಂ ಯೋಜನಾ ನಿರ್ದೇಶಕ ಡಾ.ಎಸ್.ರಂಗಸ್ವಾಮಿ ಮಾತನಾಡಿ, ಗ್ರಾಪಂ ಹಂತದಲ್ಲಿ ನೀರು ಪರೀಕ್ಷೆ ಕಿಟ್‌ಗಳ ಮೂಲಕ ಗ್ರಾಮಗಳ ಕುಡಿವ ನೀರು ಸ್ಯಾಂಪಲ್ಸ್ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು ಎಂದರು.
ಉಪಕಾರ‌್ಯದರ್ಶಿ ಕೆ.ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಇ ಬಸನಗೌಡ ಮೇಟಿ ಪಾಟೀಲ್ ಮಾತನಾಡಿದರು.
ಶುದ್ಧ ಕುಡಿಯುವ ನೀರು ಸೇವನೆ ಜಾಗೃತಿ ಭಿತ್ತಿ ಪತ್ರ, ಪರೀಕ್ಷಾ ಕೈಪಿಡಿ ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ್ ಎಸ್.ನಾಡರ್, ಜಿಲ್ಲಾ ಎಂಐಎಸ್ ಸಮಾಲೋಚಕ ಸ್ನೇಹನ್, ಜಿಲ್ಲಾ ಐಇಸಿ ಸಮಾಲೋಚಕ ಬಿ.ಸಿ.ನಾಗರಾಜು ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net