ಶುಲ್ಕ ಪಾವತಿಸಿ, ರಸೀದಿ ಪಡೆಯಲು ಸೂಚನೆ

CTD --DIST HOSPTAIL--
Published on

ಚಿತ್ರದುರ್ಗ: ಜಿಲ್ಲಾಸ್ಪತ್ರೆಯಲ್ಲಿ ಎಬಿ-ಎಆರ್‌ಕೆ ಅಡಿ ನೋಂದಣಿಯಾದ ಫಲಾನುಭವಿಗಳಿಗೆ ಎಲ್ಲ ರಕ್ತ ಪರೀಕ್ಷೆಗಳು, ಸಿಟಿ ಸ್ಕ್ಯಾನ್, ಎಕ್ಸ ರೇ, ಸ್ಕಾ ್ಯನಿಂಗ್, ಆರ್ಥೋಇಂಪ್ಲಾಂಟ್‌ಗಳು, ಔಷಧ ಉಚಿತವಾಗಿ ನೀಡಲಾಗುತ್ತದೆ. ಒಂದು ವೇಳೆ ನೋಂದಣಿಯಾಗದ ರೋಗಿಗಳು ನಿಗದಿತ ಶುಲ್ಕ ಪಾವತಿಸಿ ಕಡ್ಡಾಯವಾಗಿ ರಸೀದಿ ಕೇಳಿ ಪಡೆಯುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ಮನವಿ ಮಾಡಿದ್ದಾರೆ.

ರೋಗಿಗಳು ಆಸ್ಪತ್ರೆಗೆ ಬರುವಾಗ ತಮ್ಮ ಆಧಾರ್, ರೇಷನ್ ಕಾರ್ಡ್‌ಗಳ ನಕಲು ಪ್ರತಿಗಳನ್ನು ತರಬೇಕು. ಒಳ ರೋಗಿಗಳಾಗಿ ದಾಖಲಾಗುವ ಸಂದರ್ಭದಲ್ಲಿ ತಪ್ಪದೇ ಎಬಿ-ಎಆರ್‌ಕೆ ಕೊಠಡಿಗಳಲ್ಲಿ ಎಂಟ್ರಿ ಮಾಡಿಸಬೇಕು. ಆದರೆ, ರೋಗಿಗಳು ಇತ್ತಿಚಿನ ದಿನಗಳಲ್ಲಿ ನೇರವಾಗಿ ಖಾಸಗಿ ಆಸ್ಪತ್ರೆಗೆ ತೆರಳಿ ನಂತರ ಬಂದು ರೆಫರಲ್ ಮಾಡುವಂತೆ ವೈದ್ಯಾಧಿಕಾರಿಗಳಿಗೆ ಒತ್ತಡ ಹಾಕುತ್ತಿರುತ್ತಾರೆ. ರೋಗಿಗಳು ಮೊದಲು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಬೇಕು. ಒಂದು ವೇಳೆ ಸದರಿ ಚಿಕಿತ್ಸೆ ಲಭ್ಯವಿಲ್ಲದಿದ್ದಾಗ ಖಾಸಗಿ ಆಸ್ಪತ್ರೆಗಳಿಗೆ ರೆಫರಲ್ ಮಾಡಲಾಗುತ್ತದೆ.

ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳು ಅಥವಾ ಅವರ ಸಂಬಂಧಿಕರು ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಬಾರದು. ಯಾರಾದರೂ ಹಣ ಕೇಳಿದಲ್ಲಿ ಹಾಗೂ ಯಾವುದೇ ದೂರುಗಳಿದ್ದಲ್ಲಿ ಗಮನಕ್ಕೆ ತರುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ(9448943163) ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net