

ಹುಬ್ಬಳ್ಳಿ: ಬೆಂಗಳೂರಿನ ಸಾಯಿ ಶೂಟಿಂಗ್ ರೇಂಜ್ನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾ ಕೂಟ 2025ರಲ್ಲಿ ಧಾರವಾಡ ಜಿಲ್ಲೆಯ ಐಶ್ವರ್ಯ ಬಾಲೆಹೊಸೂರ್ ಚಿನ್ನ ಮತ್ತು ಬೆಳ್ಳಿ ಪದಕ ಜಯಿಸಿದ್ದಾಳೆ.
ಶೂಟಿಂಗ್ನ 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದರೆ, ತಂಡ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾಳೆ. ಇವಳು ಹುಬ್ಬಳ್ಳಿ ಸ್ಪೋರ್ಟ್ಸ್ ಶೂಟಿಂಗ್ ಅಕಾಡೆಮಿಯಲ್ಲಿ ಮಾಜಿ ಸೈನಿಕ ರವಿಚಂದ್ರ ಬಾಲೆಹೊಸೂರ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.