ಶೇ.40 ಕಮಿಷನ್ ಬಗ್ಗೆ ಇನ್ನಷ್ಟು ಮಾಹಿತಿ ಬಹಿರಂಗ: ಸಿದ್ದರಾಮಯ್ಯ

Siddaramayya 2
Published on

ಮೈಸೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾಮಗಾರಿ ಕೈಗೊಳ್ಳುವ ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್ ಪಡೆಯಲಾಗಿದೆ ಎಂಬ ವಿಚಾರ ಕುರಿತು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳೊಂದಿಗೆ ದೂರು ನೀಡಿದರೆ ತನಿಖೆ ನಡೆಸಿ, ಕ್ರಮ ಜರುಗಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ಆರೋಪಿ ಸ್ಥಾನದಲ್ಲಿದ್ದಾರೆ. ಅವರಿಂದ ಬೇರೆ ಏನು ನಿರೀಕ್ಷೆ ಮಾಡಲು ಸಾಧ್ಯ ಎಂದು ಜರಿದರು.

ಕಮಿಷನ್ ಪ್ರಕರಣದ ಕುರಿತು ಇನ್ನಷ್ಟು ಮಾಹಿತಿಯನ್ನು ಶುಕ್ರವಾರ ಮೈಸೂರಿನಲ್ಲಿ ನಡೆಯುವ ಮಾಧ್ಯಮ ಸಂವಾದದಲ್ಲಿ ಹಂಚಿಕೊಳ್ಳಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net