ಶೇ.೫೦ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

book 2
Published on

ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲ ಪುಸ್ತಕಗಳನ್ನು ಶೇ.೫೦ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಪುಸ್ತಕ ಪ್ರಿಯರು ಇದರ ಸದುಪಯೋಗ ಪಡೆಯಬೇಕು ಎಂದು ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್‌ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ, ಎಲ್ಲ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net