ಶೇಂಗಾ ಖರೀದಿ ಕೇಂದ್ರ ಆರಂಭಿಸಿ

24-feb-hdl-01
Published on

ಹೂವಿನಹಡಗಲಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸರ್ಕಾರದ ನಿಯಮಾನುಸಾರ ಶೇಂಗಾ ಖರೀದಿ ಕೇಂದ್ರ ಸ್ಥಾಪಿಸಿ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಉಪತಹಸೀಲ್ದಾರ್ ಸಲೀಂ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಸಂಘದ ತಾಲೂಕು ಅಧ್ಯಕ್ಷ ಹೊಸಮನಿ ಸಿದ್ದಪ್ಪ ಮಾತನಾಡಿ, ತಾಲೂಕಿನಲ್ಲಿ ಶೇಂಗಾ ಖರೀದಿ ಕೇಂದ್ರ ಇಲ್ಲದ ಕಾರಣ ನಮ್ಮ ಭಾಗದ ರೈತರು ಮುಂಡರಗಿಗೆ ಹೋಗಿ ಮಾರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇದರಿಂದಾಗಿ ರೈತರಿಗೆ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುತ್ತದೆ. ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆ 1966 ಕಾಯ್ದೆ ಪ್ರಕಾರ ಟೆಂಡರ್ ಇಲ್ಲದೆ ಖಾಸಗಿಯವರಿಗೆ ಖರೀದಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

ಗೌರವಾಧ್ಯಕ್ಷ ಪಕ್ಕೀರಪ್ಪ, ಉಪಾಧ್ಯಕ್ಷರಾದ ಚನ್ನಬಸಪ್ಪ, ವಿಠಲ್, ಪ್ರಧಾನ ಕಾರ್ಯದರ್ಶಿ ಶಿವರಾಜ, ಸಹಕಾರ್ಯದರ್ಶಿ ದುರುಗಪ್ಪ, ಸಂಘಟನಾ ಕಾರ್ಯದರ್ಶಿ ಗಿರೀಶ, ರೈತರಾದ ಮುಜ್ಜುಸಾಹೇಬ್, ಘನಿಸಾಬ್, ದೇವೇಂದ್ರಪ್ಪ, ಗಂಗಪ್ಪ, ಮಲ್ಲಿಕಾರ್ಜುನ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net