ಶೈಕ್ಷಣಿಕ ಕಾರ್ಯಾಗಾರ ಇಂದು ಜೇವರ್ಗಿಯಲ್ಲಿ

education
Published on


ಕಲಬುರಗಿ : ಜೇವರ್ಗಿಯಲ್ಲಿ ಶ್ರೀ ಮಹಾಲಕ್ಷ್ಮೀ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಶಿವಲಿಂಗಪ್ಪಗೌಡ ಪಾಟೀಲ್ ನರಿಬೋಳ ಎಜ್ಯುಕೇಶನ್ ಚಾರಿಟೇಬಲ್ ಟ್ರಸ್ಟ್ನಿಂದ ಗುರುವಾರ ಬೆಳಗ್ಗೆ ೧೦.೩೦ಕ್ಕೆ ಶೈಕ್ಷಣಿಕ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಧರ್ಮಣ್ಣ ಬಡಿಗೇರ ತಿಳಿಸಿದ್ದಾರೆ. ಯಡ್ರಾಮಿ ವಿರಕ್ತ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಶಹಾಪುರದ ಶ್ರೀ ಗಂಗಾಧರೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಉದ್ಘಾಟಿಸಲಿದ್ದು, ತಹಸೀಲ್ದಾರ್ ರಾಜೇಶ್ವರಿ ಪಿ.ಎಸ್. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net