ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಕೆಎಲ್‌ಇ ಸಂಸ್ಥೆ

1GKK1
Published on

ಗೋಕಾಕ: ಸಪ್ತರ್ಷಿಗಳಿಂದ ೧೯೧೪ರಲ್ಲಿ ಸ್ಥಾಪನೆಯಾದ ಕೆಎಲ್‌ಇ ಸಂಸ್ಥೆ, ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ನೇತೃತ್ವದಲ್ಲಿ ದೇಶ, ವಿದೇಶಗಳಲ್ಲಿ ಪ್ರಖ್ಯಾತಿ ಹೊಂದಿದೆ ಎಂದು ಕೆಎಲ್‌ಇ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು.

ನಗರದ ಕೆಎಲ್‌ಇ ಸಿ.ಎಸ್.ಅಂಗಡಿ ಪದವಿಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ಕೆಎಲ್‌ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ೭೮ನೇ ಜನ್ಮದಿನದ ನಿಮಿತ್ತ ಶುಕ್ರವಾರ ಹಮ್ಮಿಕೊಂಡಿದ್ದ ೫ ಕಿ.ಮೀ. ಮ್ಯಾರಥಾನ್‌ಗೆ ಚಾಲನೆ ನೀಡಿ ಮಾತನಾಡಿದರು. ಜನತೆಗೆ ಗುಣಮಟ್ಟದ ಶಿಕ್ಷಣ ಹಾಗೂ ಆರೋಗ್ಯ ನೀಡುವ ಉದ್ದೇಶದಿಂದ ಸ್ಥಾಪಿತವಾದ ಕೆಎಲ್‌ಇ ಸಂಸ್ಥೆ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತ ಹೆಮ್ಮರವಾಗಿ ಬೆಳೆದಿದೆ. ಮುಂಬರುವ ದಿನಗಳಲ್ಲಿ ಸಂಸ್ಥೆಯಿಂದ ಬೆಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭಿಸಲಾಗುವುದು. ನಗರದ ಕೆಎಲ್‌ಇ ಸಂಸ್ಥೆಗಳಲ್ಲಿ ೫ ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ೧೦೦ ಹಾಸಿಗೆಗಳ ಆಸ್ಪತ್ರೆಯೂ ಕಾರ್ಯನಿರ್ವಹಿಸುತ್ತಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ನೀಡಿ ಸಂಸ್ಥೆ ಕ್ರಾಂತಿ ಮಾಡುತ್ತಿದೆ ಎಂದರು.

ಅತಿಥಿಗಳಾದ ಪತಂಜಲಿ ಯೋಗ ಶಿಕ್ಷಕ ನಿಜಲಿಂಗ ದಡ್ಡಿಮನಿ, ಪರಮೇಶ ಗುಲ್ಲ, ಸ್ಥಳೀಯ ಕೆಎಲ್‌ಇ ಸಂಸ್ಥೆಯ ಪಿಯು ಆಡಳಿತಾಧಿಕಾರಿ ಜಿ.ಎಂ.ಅಂದಾನಿ, ಡಾ.ಧರೆಪ್ಪ ಚೌಗಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net