ಶೈಕ್ಷಣಿಕ ಚಟುವಟಿಕೆಗಳ ಯಶಸ್ಸಿಗೆ ಸಮನ್ವಯತೆ ಅಗತ್ಯ

CTD DIET...
Published on

ಚಿತ್ರದುರ್ಗ: ಸಮಷ್ಠಿ, ಸಮನ್ವಯತೆಯಿಂದ ಕೆಲಸ ನಿರ್ವಹಿಸಿದಾಗ ಶೈಕ್ಷಣಿಕ ಚಟುವಟಿಕೆಗಳಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುತ್ತ ದೆ ಎಂದು ಡಯಟ್ ಪ್ರಾಚಾರ‌್ಯ ಎಂ.ನಾಸಿರುದ್ದೀನ್ ಹೇಳಿದರು.

ನಗರದ ಡಯಟ್‌ನಲ್ಲಿ ಗುರುವಾರ ಉಪನ್ಯಾಸಕ ಎಸ್,ಬಸವರಾಜು ಸಂಪಾದಿಸಿರುವ 2024ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಸಚಿತ್ರಾಧಾರಿತ ‘ಪ್ರತಿಬಿಂಬ’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಕೆಲಸವನ್ನು ಪ್ರೀತಿಸಬೇಕು. ಶ್ರದ್ಧೆ, ಸಮಯ ಪ್ರಜ್ಞೆ, ಸಮರ್ಪಣಾಭಾವ, ವೃತ್ತಿ ಬೆಳವಣಿಗೆಯೊಂದಿಗೆ ಶೈಕ್ಷಣಿಕ ಚಟುವಟಿಕೆಗಳ ಯಶಸ್ಸಿಗೂ ಸಹಕಾರಿಯಾಗುತ್ತದೆ ಎಂದರು.

ಹಿರಿಯ ಉಪನ್ಯಾಸಕರಾದ ಎಸ್.ಜ್ಞಾನೇಶ್ವರ, ತಿಪ್ಪೇಸ್ವಾಮಿ, ಪೂರ್ಣಿಮಾ, ಉಪನ್ಯಾಸಕರಾದ ಆರ್.ನಾಗರಾಜು, ಎಸ್.ಬಸವರಾಜು, ವಿ.ಕನಕಮ್ಮ, ಪದ್ಮಾ, ತಾಂತ್ರಿಕ ಸಹಾಯಕ ಅವಿನಾಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net