ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ

Application
Published on

ಚಿತ್ರದುರ್ಗ: ಕ್ರೀಡಾ ಇಲಾಖೆ 2024-25ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಹ ಕ್ರೀಡಾಪಟುಗಳಿಂದ ಸೆಪ್ಟೆಂಬರ್ 25ರೊಳಗೆ ಅರ್ಜಿ ಆಹ್ವಾನಿಸಿದೆ. ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 08194-235635 ಸಂಪರ್ಕಿಸಬಹುದೆಂದು ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಂ.ನೆಲವಿಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net