ಶೈಕ್ಷಣಿಕ ಸಂಸ್ಥೆಗಳ ಬಳಿ ತಂಬಾಕು ಮಾರಾಟ ಮಾಡುವಂತಿಲ್ಲ

02 yerriswamy 04
Published on

ಬಳ್ಳಾರಿ : ಶೈಕ್ಷಣಿಕ ಸಂಸ್ಥೆಗಳ ನೂರು ಮೀ. ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ವಿ.ಕೆ. ಮರಿಯಂಬಿ ಹೇಳಿದರು.
ಇಲ್ಲಿನ ಹೊರವಲಯದ ದಾರಾಮಿಲ್, ಅಲ್ಲಿಪುರ, ಬಿಐಟಿಎಂ ಕಾಲೇಜಿನ ಸುತ್ತ ಮುತ್ತಲಿನ ಪ್ರದೇಶದ ಅಂಗಡಿಗಳ ಮೇಲೆ ಕಾರ್ಯಾಚರಣೆ ನಡೆಸಿ ಮಾತನಾಡಿದರು. ಸಾರ್ವಜನಿಕ ಸ್ಥಳಗಳನ್ನು ಧೂಮಪಾನ ಮುಕ್ತವನ್ನಾಗಿ ಇರಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಅಪ್ರಾಪ್ತ ಮಕ್ಕಳಿಂದ ಉತ್ಪಾದನೆ, ಸೇವನೆ ಮತ್ತು ಮಾರಾಟ ಮಾಡಿಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ವೇಳೆ ಅಪರಾಧ ಕಂಡುಬಂದಲ್ಲಿ ಅದರ ಹೊಣೆಗಾರಿಕೆಯನ್ನು ಅಂಗಡಿಯ ಮಾಲೀಕರಿಗೆ ವಿಧಿಸಲಾಗುವುದು ಎಂದು ಎಚ್ಚರಿಸಿದರು. ಬಳಿಕ, 21 ಅಂಗಡಿಗಳ ಮೇಲೆ ದಾಳಿ ಮಾಡಿ ದಂಡ ವಿಧಿಸಲಾಯಿತು. ಅಲ್ಲದೆ, ಎರಡು ಅಂಗಡಿಗಳ ಮುಂಭಾಗದಲ್ಲಿ ಇರಿಸಿದ್ದ ತಂಬಾಕು ಸೇವನೆಗೆ ಉತ್ತೇಜನ ನೀಡುವಂತಹ ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net