

ಮಡಿಕೇರಿ: ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಸೋಮವಾರ ನೋಂದಾಯಿತ ಕಟ್ಟಡ ಕಾರ್ಮಿಕರ 6ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮಗ್ರಿ ಕಿಟ್‌ಗಳನ್ನು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ವಿತರಿಸಿದರು.
9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶ್ರಮಿಕ್ ಟ್ಯಾಬ್, ಪೇಂಟರ್‌ಗೆ ಪೇಂಟಿಂಗ್ ಟೂಲ್ ಕಿಟ್, ಕಾಪೇರ್ಂಟರಗೆ ಕಾಪೇರ್ಂಟರ್ ಟೂಲ್ ಕಿಟ್, ಪ್ಲಂಬರ್‌ಗೆ ಪ್ಲಂಬಿಂಗ್ ಟೂಲ್ ಕಿಟ್‌ಗಳನ್ನು ವಿತರಿಸಲಾಯಿತು.
ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎಂ. ಯತ್ನಟ್ಟಿ, ಇಲಾಖೆಯ ಸಿಬ್ಬಂದಿ ಹಾಜರಿದ್ದರು.