ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

11.npk-2
Published on

ನಾಪೋಕ್ಲು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಹಮ್ಮಿಕೊಂಡಿರುವ ಹಿಂದುಳಿದ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಉಪನ್ಯಾಸಕ ಹಾಗೂ ಮೈಸೂರು ಜಿಲ್ಲೆಯ ಸಮೀಕ್ಷೆಯ ತರಬೇತುದಾರ ಪಟ್ಟಡ ಶಿವಕುಮಾರ್ ಮನವಿ ಮಾಡಿದರು.]

ಅವರು ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಪುತ್ತೂರಿನ ಒಕ್ಕಲಿಗರ ಸಭಾ ಭವನ ತೆಂಕಿಲದಲ್ಲಿ ಹಮ್ಮಿಕೊಂಡಿದ್ದ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಮೀಕ್ಷೆಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರದ ನೀತಿ ನಿರೂಪಣೆಗೆ ಪೂರಕವಾಗಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬರೂ ವಾಸ್ತವಿಕ ಮಾಹಿತಿಯನ್ನು ಒದಗಿಸುವ ಮೂಲಕ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಸಮೀಕ್ಷೆಯು ಸೆ.22 ರಿಂದ ಅ.7 ರವರೆಗೆ ನಡೆಯಲಿದ್ದು, ಆ ಸಂದರ್ಭದಲ್ಲಿ ಒದಗಿಸಬೇಕಾದ ಮಾಹಿತಿಗಳನ್ನು ಮೊದಲೇ ಸಿದ್ಧಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು. ಈ ಸಮೀಕ್ಷೆಯು ಅತ್ಯಂತ ವೈಜ್ಞಾನಿಕವಾಗಿ ನಡೆಯಲಿದ್ದು, ಸಮೀಕ್ಷೆಗೆ ಬರುವ ಸಿಬ್ಬಂದಿ ಕೇಳುವ 60 ಪ್ರಶ್ನೆಗಳಿಗೆ ಸಮರ್ಪಕ ಉತ್ತರವನ್ನು ನೀಡುವ ಮೂಲಕ ಈ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಾಜಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ಕೆ.ವಿ. ರೇಣುಕ ಪ್ರಸಾದ್ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net