ಶೋಷಿತ ಸಮುದಾಯಗಳ ಅಸ್ಮಿತೆ

20 SIRAGUPPA 01
Published on

ಸಿರಗುಪ್ಪ: ಮೀಸಲಾತಿ ಸೌಲಭ್ಯ ಕಲ್ಪಿಸುವ ಮೂಲಕ ಶೋಷಿತ ಸಮುದಾಯಗಳಿಗೆ ಅಸ್ಮಿತೆ ತಂದುಕೊಟ್ಟ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದಾರೆ ಎಂದು ವಾಲ್ಮೀಕಿ ವಿದ್ಯಾ ಅಭಿವೃದ್ದಿ ಟ್ರಸ್ಟ್ ಅಧ್ಯಕ್ಷ ಬಿ.ಎಂ.ಸತೀಶ್ ಹೇಳಿದರು.

ಪಟ್ಟಣದ ಅಭಯಾಂಜನೇಯ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ತಾಲೂಕು ಆಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ದೇವರಾಜ ಅರಸು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಬುಧವಾರ ಮಾತನಾಡಿದರು.

ತಹಶೀಲ್ದಾರ್ ಗೌಸಿಯಾ ಬೇಗಂ, ತಾಪಂ ಇಒ ಪವನ್ ಕುಮಾರ್, ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ ವೆಂಕಟೇಶ, ಉಪಾಧ್ಯಕ್ಷೆ ಯಶೋದಾಮೂರ್ತಿ, ಕುರುಬ ಸಂಘದ ತಾಲೂಕು ಅಧ್ಯಕ್ಷ ದಮ್ಮೂರು ಸೋಮಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕರಿಬಸಪ್ಪ, ವಕೀಲರ ಸಂಘದ ಅಧ್ಯಕ್ಷ ಉಪ್ಪಾರ ವೆಂಕೋಬ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಟಿ.ಹುಚ್ಚೀರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೆ.ಮಲ್ಲಿಕಾರ್ಜುನ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಡ್ಡೇರು ಸಿದ್ದಯ್ಯ, ಮುಖಂಡರಾದ ಕಾಯಿಪಲ್ಲೆ ನಾಗರಾಜ, ಗೋರವರ ಶ್ರೀನಿವಾಸ, ಹನುಮಂತಪ್ಪ, ಸಣ್ಣರಾಮಯ್ಯ, ಗಣೇಶ, ಗಾಳೆಪ್ಪ, ಮೀರಾಹುಸೇನ, ಕೆ.ಕೃಷ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net