ಶೋಷಿತರ ಏಳಿಗೆಗೆ ಸ್ಥಾನಮಾನ ದೊರಕಿದ ಅರಸು

20blrp4.
ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜಯಂತಿ ಆಚರಿಸಲಾಯಿತು. ಎಂ.ಮಮತಾ, ತೀರ್ಥಕುಮಾರಿ, ಜಮೀಲಾ ತೌಫಿಕ್ ಇತರರು ಇದ್ದರು.
Published on

ಬೇಲೂರು: ದೂರ ದೃಷ್ಟಿಯೊಂದಿಗೆ ಅನೇಕ ಹಿಂದುಳಿದ ಹಾಗೂ ಶೋಷಿತ ಸಮಾಜಗಳ ಏಳಿಗೆಗಾಗಿ ಸ್ಥಾನಮಾನ ದೊರಕಿಸಿಕೊಟ್ಟ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಎಂದು ತಹಸೀಲ್ದಾರ್ ಎಂ.ಮಮತಾ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಡಿ.ದೇವರಾಜ ಅಸರು ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವರಾಜ ಅರಸು ಅವರು ಉದ್ಯೋಗ ಮತ್ತು ಶಿಕ್ಷಣದಿಂದ ಮಾತ್ರ ಅಸಮಾನತೆ ಹೋಗಲಾಡಿಸಲು ಸಾಧ್ಯ ಎಂಬುದನ್ನು ಅರಿತು ಸಮಾನತೆ ಸಾರಿದ್ದರು. ಎಲ್ಲ ಸಮಾಜದವರನ್ನು ಸಮಾನವಾಗಿ ಕಾಣಬೇಕೆಂಬ ಉದ್ದೇಶದಿಂದ ಬಲಾಢ್ಯರ ಜಮೀನುಗಳಲ್ಲಿ ಯಾರೂ ಉಳುಮೆ ಮಾಡುತ್ತಿರುತ್ತಾರೋ ಅವರೇ ಭೂಮಿಯ ಒಡೆಯ ಎಂದು ಯೋಜನೆ ಜಾರಿಗೆ ತರುವ ಮೂಲಕ ಕ್ರಾಂತಿಕಾರಿ ನಿಲುವು ತೆಗೆದುಕೊಂಡಿದ್ದರು ಎಂದರು.

ಉದ್ಯೋಗ ಮತ್ತು ಶಿಕ್ಷಣದಲ್ಲಿ ಬುಡಕಟ್ಟು, ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವುದಕ್ಕಾಗಿ ಹಾವನೂರ ಆಯೋಗ ರಚಿಸಿ ಸಾಕಷ್ಟು ಜನರು ಉದ್ಯೋಗ ಪಡೆಯುವಂತೆ ಮಾಡಿದ್ದರು. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 20 ಅಂಶಗಳ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದರು ಎಂದು ಬಣ್ಣಿಸಿದರು.

ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಒಂದು ಜಾತಿಗೆ ಸೀಮಿತರಾದವರಲ್ಲ. ಅವರ ಮಹತ್ತರವಾದ ಕೆಲಸಗಳು ಇಂದಿಗೂ ಶಾಶ್ವತವಾಗಿವೆ ಎಂದರು.

ಪುರಸಭೆ ಉಪಾಧ್ಯಕ್ಷೆ ಜಮೀಲಾ ತೌಫಿಕ್, ಸದಸ್ಯರಾದ ರತ್ನಾ, ಸೌಮ್ಯಾ, ಉಷಾ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪುಟ್ಟಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ಶಿವಮರಿಯಪ್ಪ, ತಾಪಂ ಇಒ ದಯಾನಂದ್, ಲೋಕೋಪಯೋಗಿ ಇಲಾಖೆ ಎಇಇ ಪುಟ್ಟಸ್ವಾಮಿ, ಉಪ ಅರಣ್ಯಾಧಿಕಾರಿ ಗುರುರಾಜ್, ತಮ್ಮಣ್ಣಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net