ಶ್ರದ್ಧಾ, ಭಕ್ತಿಯ ದೇವಿ ಪಲ್ಲಕ್ಕಿ ಮೆರವಣಿಗೆ

Aurad Taluka Tuljapur Pallakki Meravanige
Published on

ಔರಾದ್: ತಾಲ್ಲೂಕಿನ ತುಳಜಾಪುರ ಗ್ರಾಮದಲ್ಲಿ ವಿಜಯದಶಮಿ ಪ್ರಯುಕ್ತ ಶ್ರದ್ಧೆ, ಭಕ್ತಿಯಿಂದ ದೇವಿ ಪಲ್ಲಕ್ಕಿ ಮೆರವಣಿಗೆ ನಡೆಯಿತು.
ಮಂದಿರದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆದ ಅಲಂಕೃತ ಪಲ್ಲಕ್ಕಿಯ ಮೆರವಣಿಗೆಯಲ್ಲಿ ನೂರಾರು ಜನ ಪಾಲ್ಗೊಂಡಿದ್ದರು. ಭಜನೆ, ಯುವಕರ ನರ್ತನ ಮೆರವಣಿಗೆಗೆ ಕಳೆ ಕಟ್ಟಿದವು. ದೇವಿಗೆ ಜಯಕಾರದ ಘೋಷಣೆ ಮೊಳಗಿದವು.
ಕೋವಿಡ್ ನಿಯಂತ್ರಣಕ್ಕೆ ಬಂದ ಕಾರಣ ಬಾರಿ ಗ್ರಾಮದಲ್ಲಿ ವಿಜಯದಶಮಿ, ದೇವಿ ಪಲ್ಲಕ್ಕಿ ಉತ್ಸವ ವೈಭವದಿಂದ ನಡೆದಿದೆ. ಜಿಲ್ಲೆ ಹಾಗೂ ನೆರೆ ರಾಜ್ಯಗಳ ಭಕ್ತರು ದೇವಿ ಮಂದಿರದಲ್ಲಿ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ದೇವಿಗೆ ಭಕ್ತಿ ಸಮರ್ಪಣೆ ಮಾಡಿದ್ದಾರೆ ಎಂದು ಗ್ರಾಮದ ಆರಿಫ್ ಮುಲ್ಲಾ ತಿಳಿಸಿದರು.
ದೇವಿ ಮಂದಿರದಲ್ಲಿ ವಿಶೇಷ ಪೂಜೆ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಅನೇಕರು ಹರಕೆ ತೀರಿಸಿದರು. ಭಕ್ತರಿಗೆ ಮಹಾ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net