ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ

web 3
Published on

ಧಾರವಾಡ: ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲೀಂ ಬಾಂಧವರು ಗುರುವಾರ ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ನಗರದ ಈದ್ಗಾ ಮೈದಾನದಲ್ಲಿ ಸಾವಿರಾರು ಜನ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಮಳೆ- ಬೆಳೆ ಸೇರಿ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಮೂಡಲೆಂದು ಪ್ರಾರ್ಥಿಸಿದರು. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಧರ್ಮಗುರು ಖತೀಬ್ ಅವರ ನೇತೃತ್ವದಲ್ಲಿ ಸಾಮೂಹಿಕ ನಮಾಜ್ ಮಾಡಿದರು. ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಕ್ಬಾಲ್ ಜಮಾದಾರ, ಪದಾಽಕಾರಿಗಳು ಹಾಗೂ ಗಣ್ಯರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಗ್ರಾಮೀಣ ಭಾಗದಲ್ಲೂ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net