ಶ್ರಾವಣ ಮಾಸದ ಪ್ರಯುಕ್ತ ಶ್ರೀ ಶನೈಶ್ವರಸ್ವಾಮಿ ಪೂಜೆ

10 vpt 3.1
ವಿರಾಜಪೇಟೆ ತಾಲೂಕಿನ ಮಗ್ಗುಲ ಗ್ರಾಮದ ಶ್ರೀ ಶನೈಶ್ವರ ಮತ್ತು ನವಗ್ರಹ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.
Published on

ವಿರಾಜಪೇಟೆ: ಶ್ರಾವಣ ಮಾಸದ ಪ್ರಥಮ ಶನಿವಾರ ದಿನದ ಅಂಗವಾಗಿ ಶ್ರೀ ಶನೈಶ್ಚರ ಮತ್ತು ನವಗ್ರಹ ದೇವಾಲಯದಲ್ಲಿ ಶ್ರಾವಣ ಶನಿವಾರದ ಪೂಜಾ ಕೈಂಕರ್ಯಗಳು ಭಕ್ತಿ-ಭಾವದಿಂದ ಶನಿವಾರ ಜರುಗಿತು.

ವಿರಾಜಪೇಟೆ ತಾಲೂಕಿನ ಮಗ್ಗುಲ ಗ್ರಾಮದ ಶ್ರೀ ಶನೈಶ್ವರ ಮತ್ತು ನವಗ್ರಹ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಥಮ ಶನಿವಾರದ ಪೂಜಾ ಕಾರ್ಯಕ್ರಮಗಳು ಬೆಳಗ್ಗೆ ಗಣಪತಿ ಹೋಮದೊಂದಿಗೆ ಆರಂಭವಾಯಿತು. ಅರ್ಚಕರಾದ ಸಂತೋಷ್ ಹೆಬ್ಬಾರ್ ಮತ್ತು ಪವನ್‌ಕುಮಾರ್ ಭಟ್ ಸಾರಥ್ಯದಲ್ಲಿ ಪೂಜೆಗಳು ಆರಂಭಗೊಂಡವು. ದೇವಾಲಯದಲ್ಲಿ ನವಗ್ರಹ ಪೂಜೆ, ಶನಿ ಶಾಂತಿ, ಶನಿ ಜಪ, ರಾಹು ಕೇತು ಜಪ, ಕುಂಕುಮಾರ್ಚನೆ, ಮೃತ್ಯುಂಜಯ ಜಪ ಪೂಜಾದಿಗಳು ಜಗುರಿದವು. ಬಳಿಕ ಮಧ್ಯಾಹ್ನ 1 ಗಂಟೆಗೆ ಶ್ರೀ ಶನೈಶ್ಚರ ಸ್ವಾಮಿಗೆ ಮಾಹಾ ಮಂಗಳಾರತಿ, ಮಾಹಾಪೂಜೆ ಸಲ್ಲಿಸಲಾಯಿತು.

ದೇವಾಲಯದಲ್ಲಿ ಆ.17, 24 ಹಾಗೂ 31 ರಂದು ಶ್ರಾವಣ ಶನಿವಾರದ ವಿಶೇಷ ಪೂಜೆಗಳು ನಡೆಯಲಿವೆ. ಮಾಹಾಪೂಜೆಯ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ.

ಮಾಹಾಪೂಜೆಯ ಸಂದರ್ಭದಲ್ಲಿ ದೇಗುಲ ತಕ್ಕರಾದ ಚೊಕಂಡ ರಮೇಶ್ ಮತ್ತು ಕುಟುಂಬಸ್ಥರು, ಪುರೋಹಿತ ವರ್ಗ, ಗ್ರಾಮಸ್ಥರು ನಗರ ಮತ್ತು ಸ್ಥಳೀಯ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇಗುಲಕ್ಕೆ ಆಗಮಿಸಿ ಶ್ರೀ ಶನೈಶ್ಚರ ದೇವರ ಅನುಗ್ರಹ ಪಡೆದು ಪುನಿತರಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net