ಶ್ರಾವಣ ಸೋಮವಾರ: ತೊಗರ್ಸಿ ಮಲ್ಲಿಕಾರ್ಜುನಸ್ವಾಮಿ ದರ್ಶನಕ್ಕೆ ಭಕ್ತರ ದಂಡು

SKP WEB
Published on

ಶಿಕಾರಿಪುರ: ಕಡೆಯ ಶ್ರಾವಣ ಸೋಮವಾರದ ಪ್ರಯುಕ್ತ ಸಮೀಪದ ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿಗೆ ತೊಗರ್ಸಿಯ ಶ್ರೀ ಮಹಾಂತ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಚನ್ನವೀರ ದೇಶಿಕೇಂದ್ರ ಸ್ವಾಮೀಜಿ ಮತ್ತು ಅಭಿನವ ಶ್ರೀ ಮಹಾಂತ ದೇಶಿಕೇಂದ್ರ ಕಿರಿಯ ಸ್ವಾಮೀಜಿಗಳ ನೇತೃತ್ವದಲ್ಲಿ ಮುಂಜಾನೆಯಿಂದಲೇ ರುದ್ರಾಭಿಷೇಕ, ಪೂಜೆಗಳು ನಡೆದವು. ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಶಿವಮೊಗ್ಗ, ಹಾವೇರಿ, ವಿಜಯಪುರ, ಗದಗ, ಧಾರವಾಡ, ದಾವಣಗೆರೆ , ಬಳ್ಳಾರಿ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ಭಕ್ತಾದಿಗಳಿಗೆ ಅನ್ನದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ಕಳೆದೊಂದು ವಾರದಿಂದ ಮಳೆ ಬಿಡುವು ಕೊಟ್ಟ ಕಾರಣದಿಂದ ಭಕ್ತರ ಸಂಖ್ಯೆ ಹೆಚ್ಚಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net