ಶ್ರೀ ಆದಿ ದಂಡಿನ ಮಾರಿಯಮ್ಮ ಉತ್ಸವ

Oplus_0
ವಿರಾಜಪೇಟೆ ಪಟ್ಟಣದ ಶಿವಕೇರಿಯ ಶ್ರೀ ಆದಿ ದಂಡಿನ ಮಾರಿಯಮ್ಮ ಉತ್ಸವ ಮೂರ್ತಿಯನ್ನು ರಥದಲ್ಲಿಟ್ಟು ಮೆರವಣಿಗೆ ನಡೆಸಲಾಯಿತು.
Published on

ವಿರಾಜಪೇಟೆ: ಪಟ್ಟಣದ ಶಿವಕೇರಿಯ ಶ್ರೀ ಆದಿ ದಂಡಿನ ಮಾರಿಯಮ್ಮ ಮತ್ತು ಶ್ರೀ ಚಾಮುಂಡಿ ದೇವಸ್ಥಾನದ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಮಂಗಳವಾರ ನೆರವೇರಿತು. ಬೆಳಗ್ಗೆ ಗಣಪತಿ ಹೋಮ, 8.30 ಗಂಟೆಗೆ ಕಳಶ ಪೂಜೆ, ಮಧ್ಯಾಹ್ನ 1 ಗಂಟೆಗೆ ದೇವಿಗೆ ಹೂವಿನ ಅಲಂಕಾರದೊಂದಿಗೆ ಮಹಾಪೂಜೆ ಮತ್ತು ಮಂಗಳಾರತಿ ನೆರವೇರಿತು. ನಂತರ ಅನ್ನಸಂತರ್ಪಣೆ ನಡೆಯಿತು. ಸಂಜೆ 4 ಗಂಟೆಗೆ ದೇವಿಯ ಪಲ್ಲಕ್ಕಿಯನ್ನು ಅಲಂಕೃತ ಮಂಟಪದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net