

ಚಿಕ್ಕಮಗಳೂರು: ಮೇಲ್ ಮರವತ್ತೂರು ಶ್ರೀ ಆದಿಪರಾಶಕ್ತಿ ದೇವಿಯ ೧೯ನೇ ವಾರ್ಷಿಕ ಉತ್ಸವ ಇಲ್ಲಿನ ಲಕ್ಷಿö್ಮÃಶ ನಗರದಲ್ಲಿ ನೂರಾರು ಭಕ್ತರ ನಡುವೆ ಮಂಗಳವಾರ ವೈಭವದಿಂದ ನಡೆಯಿತು. ಉತ್ಸವದ ಅಂಗವಾಗಿ ಶ್ರೀಆದಿಪರಾಶಕ್ತಿ ದೇವಿಗೆ ಅಭಿಷೇಕ, ವಿಶೇಷ ಪೂಜೆ, ಅಲಂಕಾರ, ಕುಂಕುಮಾರ್ಚನೆ, ಪುಷ್ಪಾರ್ಚನೆ, ಮಾಲಾಧಾರಿಗಳಿಂದ ಸಾಮೂಹಿಕ ಭಜನೆ, ನಾಮ ಸಂಕೀರ್ತನೆ, ಸ್ತೋತ್ರ ಪಠಣ, ಕುಂಕುಮಾರ್ಚನೆ ಜರುಗಿತು.
ಮಧ್ಯಾಹ್ನ ಮಹಾಮಂಗಳಾರತಿ ನಂತರ ಶ್ರೀ ಆದಿಪರಾಶಕ್ತಿ ಭಕ್ತ ಮಂಡಳಿಯಿAದ ಬಡವರಿಗೆ ವಸ್ತçದಾನ ಮಾಡಲಾಯಿತು. ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಿತು.
ಉತ್ಸವದ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ ಮಾತನಾಡಿದ ಶ್ರೀಆದಿಪರಾಶಕ್ತಿ ಭಕ್ತ ಮಂಡಳಿಯ ಅಧ್ಯಕ್ಷ ಸಿ.ಬಿ.ನಾಗರಾಜ್ ಲೋಕಕಲ್ಯಾಣಾರ್ಥವಾಗಿ ಕಳೆದ ೧೯ ವರ್ಷಗಳಿಂದ ಉತ್ಸವವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಆದಿಪರಾಶಕ್ತಿ ಭಕ್ತ ಮಂಡಳಿಯಿAದ ನೀಡಲಾದ ವಸ್ತçಗಳನ್ನು ಬಡವರಿಗೆ ವಿತರಿಸಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್, ಹಬ್ಬ ಹರಿ ದಿನಗಳು, ಜಾತ್ರೆ, ಉತ್ಸವಗಳು, ರಥೋತ್ಸವಗಳಲ್ಲಿ ಎಲ್ಲರೂ ಪಾಲ್ಗೊಳ್ಳುವುದರಿಂದ ಸಮಾಜದಲ್ಲಿ ಸಾಮರಸ್ಯ ಹಾಗೂ ಸೌಹಾರ್ದತೆ ಬೆಳೆಯುತ್ತದೆ ಎಂದರು.
ದೇವಾಲಯಗಳಿರುವುದು ದೇವರಿಗಾಗಿ ಅಲ್ಲ. ಬದಲಿಗೆ ಭಕ್ತರಿಗಾಗಿ. ನಾವು ದೇವಾಲಯಗಳಿಗೆ ತೆರಳುವುದರಿಂದ ಮಾನಸಿಕ ಶಾಂತಿ, ನೆಮ್ಮದಿ, ಸಮಾಧಾನ ದೊರೆಯುತ್ತದೆ ಎಂದು ತಿಳಿಸಿದರು.
ಶ್ರೀ ಆದಿಪರಾಶಕ್ತಿ ಭಕ್ತ ಮಂಡಳಿಯ ಖಜಾಂಚಿ ಅಣ್ಣಪ್ಪ. ಪದಾಧಿಕಾರಿಗಳಾದ ಮಧು. ಜಾನಕಮ್ಮ. ಎನ್. ಕುಮಾರ್. ಶಾರದಮ್ಮ. ಕೃಷ್ಣ ಲಲ್ಲಾ. ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಜೆ. ಸತ್ಯನಾರಾಯಣ ಉತ್ಸವದಲ್ಲಿ ಪಾಲ್ಗೊಂಡಿದ್ದರು.