ಶ್ರೀ ಕಾಡುಬಸವೇಶ್ವರನಿಗೆ ಪೂಜೆ

29BTP01
ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮದ ಶ್ರೀ ಕಾಡುಬಸವೇಶ್ವರ ದೇವಸ್ಥಾನದಲ್ಲಿ ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರ ದಹಯೋಗದೊಂದಿಗೆ ವಿಶೇಷ ಪೂಜೆ ನಡೆಯಿತು.
Published on

ಬೆಟ್ಟದಪುರ: ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮದ ಶ್ರೀ ಕಾಡುಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ನೆರವೇರಿತು.

ಗ್ರಾಮದ ಒಳತಿಗಾಗಿ ಹಾಗೂ ಸಕಾಲದಲ್ಲಿ ಮಳೆ ಬೆಳೆಯಾಗಬೇಕು ಎಂದು ಪ್ರತಿ ವರ್ಷವೂ ದೇವರಿಗೆ ಪೂಜೆ ಸಲ್ಲಿಸುವುದು ವಾಡಿಕೆ. ಅದರಂತೆ ಈ ವರ್ಷವೂ ಗ್ರಾಮಸ್ಥರು ಒಗ್ಗೂಡಿ ಪೂಜೆ ಕಾರ್ಯಕ್ರಮ ಆಯೋಜಿಸಿದ್ದರು. ಪೂಜೆ ಹಿನ್ನೆಲೆಯಲ್ಲಿ ಗುಡಿಯಲ್ಲಿ ಪ್ರತಿಷ್ಠಾಪಿಸಿರುವ ಮೂಲ ಮೂರ್ತಿಗೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿ, ಪೂಜೆ ಸಲ್ಲಿಸಲಾಯಿತು. ಬಳಿಕ ಮಹಾಮಂಗಳಾರತಿ ಮಾಡಲಾಯಿತು. ಭಕ್ತಾದಿಗಳಿಗೆ ಪ್ರಸಾದ ಮತ್ತು ಅನ್ನಸಂತರ್ಪಣೆ ಮಾಡಲಾಯಿತು. ಕಾಕತಾಳಿಯ ಎಂಬಂತೆ ಪೂಜೆ ಕಳೆದ ಎರಡು ಬಳಿಕ ಜೋರು ಮಳೆ ಆರಂಭವಾಗಿ ಒಂದು ಗಂಟೆಗೂ ಹೆಚ್ಚಿನ ಕಾಲ ಸುರಿಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net