

ಕೆ.ಆರ್.ಸಾಗರ: ಹುಲಿಕೆರೆ ಗ್ರಾಮದ ಬಿ.ಜಿ.ಎಸ್ ಬಾಲಜಗತ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮಕ್ಕಳಿಗೆ ರಾಧೆ-ಕೃಷ್ಣ ವೇಷಭೂಷಣ ಸ್ಪರ್ಧೆಯನ್ನು ಬುಧವಾರ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳು ಉತ್ತಮ ಪ್ರಜೆಗಳಾಗಲು ಮೊದಲು ಪಾಲಕರು ತಮ್ಮ ಮಕ್ಕಳ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ಅವರ ದಿನನಿತ್ಯದ ಚಟುವಟಿಕೆಗಳ ಬಗ್ಗೆ ತಿಳಿದುಕೊಳ್ಳಬೇಕು. ಶಿಕ್ಷಕರು ಮಕ್ಕಳ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ನಿವೃತ್ತ ಉಪನ್ಯಾಸಕ ಚಂದ್ರೇಗೌಡ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹತ್ವ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ರಾಧೆ-ಕೃಷ್ಣನ ವೇಷಭೂಷಣ ತೊಟ್ಟು ಗಮನ ಸೆಳೆದರು. ಮುಖ್ಯಶಿಕ್ಷಕಿ ಆಶಾ, ಶಿಕ್ಷಕರು, ಪಾಲಕರು ಉಪಸ್ಥಿತರಿದ್ದರು.