ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ 7ಕ್ಕೆ

lord-krishna-8083043_1280
Published on

ಬೀದರ್: ಶ್ರೀ ಕೃಷ್ಣ ಚೈತನ್ಯ ಟ್ರಸ್ಟ್ ವತಿಯಿಂದ ನಗರದ ಮಾಮನಕೇರಿ ಬಳಿಯ ಜ್ಞಾನಸುಧಾ ಶಾಲೆ ಸಮೀಪದ ಜಗನ್ನಾಥ ದೇವಸ್ಥಾನದಲ್ಲಿ ಸೆ. 7 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
ಮಹೋತ್ಸವದ ಅಂಗವಾಗಿ ಸಂಜೆ 6 ರಿಂದ 9 ರ ವರೆಗೆ ಹರಿನಾಮ ಸಂಕೀರ್ತನೆ, ಸಾಂಸ್ಕøತಿಕ ಕಾರ್ಯಕ್ರಮ, ಶ್ರೀಕೃóóಷ್ಣ ಕಥಾ, ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.
ಪಂಢರಪುರದ ಇಸ್ಕಾನ್‍ನ ಶ್ರವಣ ಭಕ್ತದಾಸ ಅವರು ಶ್ರೀ ಕೃಷ್ಣ ಕಥಾ ನಡೆಸಿಕೊಡಲಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶ್ರೀ ಕೃಷ್ಣ ಚೈತನ್ಯ ಟ್ರಸ್ಟ್ ಅಧ್ಯಕ್ಷರು ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net