ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪಲ್ಲಕ್ಕಿ ಉತ್ಸವ

CTD 26 SRI GURU--0004
Published on

ಚಿತ್ರದುರ್ಗ: ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಪ್ರಯುಕ್ತ ನಗರದ ಕೆಳಗೋಟೆ ದೇವಾಲಯದಲ್ಲಿ ಮಂಗಳವಾರ ಶ್ರೀ ಸ್ವಾಮಿಗೆ ವಿಶೇಷ ಪೂಜೆ, ಪಲ್ಲಕ್ಕಿ ಉತ್ಸವ ಹಾಗೂ ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು.
ಶ್ರೀ ಗುರು ತಿಪ್ಪೇರುದ್ರಸ್ವಾಮಿ ಟ್ರಸ್ಟ್ ಕಾರ್ಯಕ್ರಮ ಏರ್ಪಡಿಸಿತ್ತು. ಸೋಮವಾರ ಗಂಗಾಪೂಜೆ, ಧ್ವಜಾರೋಹಣ, ರಾತ್ರಿ ಭಕ್ತರಿಂದ ಭಜನಾ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಸ್ವಾಮಿಗೆ ರುದ್ರಾಭಿಷೇಕ, ಬಳಿಕ ವಿವಿಧ ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ಮಧ್ಯಾಹ್ನ ಪಲ್ಲಕ್ಕಿ ಉತ್ಸವ ನೆರವೇರಿತು. ಶ್ರೀ ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಐಮಂಗಲ ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲ ಪಾಪಣ್ಣ, ಉದ್ಯಮಿ ವಿಶ್ವನಾಥ್, ಕಬೀರಾನಂದಾಶ್ರಮದ ಕಾರ್ಯದರ್ಶಿ ವಿ.ಎಲ್. ಪ್ರಶಾಂತ್, ನಾಗರಾಜ್ ಸಂಗಂ, ಮಂಜುನಾಥ್‌ಗುಪ್ತ, ಪ್ರವೀಣ್, ತಿಪ್ಪೇಸ್ವಾಮಿ, ನಿರಂಜನ, ಜ್ಞಾನಮೂರ್ತಿ, ರಾಮಣ್ಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net